ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಅಗ್ನಿಮಿತ್ರ ಪಾಲ್ ಶುಕ್ರವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವಂತೆ ಸವಾಲು ಹಾಕಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡುವ ವೇಳೆ ಹೇಳಿಕೆ ನೀಡಿದ ಅಗ್ನಿಮಿತ್ರ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಧೈರ್ಯವಿದ್ದರೆ, ಪ್ರಧಾನಿ ಆಗಬೇಕೆಂಬ ಅಸೆ ಇದ್ದರೆ ಮುಂಬರುವ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಸ್ಪರ್ಧೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಇಂಡಿಯಾ ಬ್ಲಾಕ್‌ನ ನಾಲ್ಕನೇ ಸಭೆಯಲ್ಲಿ ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಮಮತಾ ಬ್ಯಾನರ್ಜಿ ಸೂಚಿಸಿದ ಹಿನ್ನೆಲೆಯಲ್ಲಿ ಪಾಲ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: Kaatera; ಇಂದು ಮಂಡ್ಯದಲ್ಲಿ ‘ಕಾಟೇರ’ ಹಬ್ಬ; ಕಲರ್ ಫುಲ್ ವೇದಿಕೆಯಲ್ಲಿ ಪ್ರಿ ರಿಲೀಸ್ ಇವೆಂಟ್