Advertisement

“ಕನಕಪುರದಲ್ಲಿ ಪ್ರತಿಭಟಿಸಲು ಯಾಕೆ ಹೋಗಬೇಕು’

10:59 PM Jan 13, 2020 | Team Udayavani |

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರು ಯೇಸು ಪ್ರತಿಮೆ ನಿರ್ಮಾಣ ಮಾಡುವ ವಿಚಾರದಲ್ಲಿ ನಾನು ತಪ್ಪು ಕಂಡು ಹಿಡಿಯಲು ಹೋಗಲ್ಲ. ನಮ್ಮ ಅಭ್ಯಂತರವೂ ಇಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಈ ವಿಚಾರದಲ್ಲಿ ಯಾಕೆ ರಾಜಕೀಯ ಮಾಡುತ್ತಿದ್ದಾರೋ ಅರ್ಥವಾಗುತ್ತಿಲ್ಲ.

Advertisement

ಯೇಸು ಪ್ರತಿಮೆ ಸಂಬಂಧ ಅಲ್ಲಿನವರದು ಯಾರಾದಾದರೂ ಅಭ್ಯಂತರ ಇದೆಯಾ? ಆಲ್ಲಿ ಪ್ರತಿಭಟನೆಗೆ ಬೆಂಗಳೂರು, ಮಂಗಳೂರಿನಿಂದ ಯಾಕೆ ಹೋಗಬೇಕು ಎಂದು ಪ್ರಶ್ನಿಸಿದರು. ಈ ದೇಶದಲ್ಲಿ ಸರ್ವಧರ್ಮಗಳ ರಕ್ಷಣೆಗೆ ಸಂವಿಧಾನದಲ್ಲಿ ಅವಕಾಶವಿದೆ. ಈ ರೀತಿ ಮಾಡಿದರೆ ಬಿಜೆಪಿಯವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದರು.

ಜ.23ಕ್ಕೆ ಸಮಾವೇಶ: ಪಕ್ಷ ಸಂಘಟನೆಗಾಗಿ ಜ.23ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಲಾಗುವುದು. ಹಾಲಿ, ಮಾಜಿ ಶಾಸಕರು, ಸೋತ ಅಭ್ಯರ್ಥಿಗಳು ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗುವುದು. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯೂ ಸದ್ಯದಲ್ಲೇ ನಿಗದಿಪಡಿಸಲಾಗುವುದು ಎಂದು ಹೇಳಿದರು. ಪಕ್ಷ ಸಂಘಟನೆಗೆ ನಿರಂತರ ಶ್ರಮಿಸುತ್ತೇನೆ. ರಾಜ್ಯದಲ್ಲಿ ಪ್ರಬಲ ಪ್ರಾದೇಶಿಕ ಪಕ್ಷ ಕಟ್ಟುತ್ತೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next