ಬೆಂಗಳೂರು: ಬೆಳಗಾವಿಯ ಪೀರನವಾಡಿಯಲ್ಲಿ ಪ್ರತಿಮೆ ಪ್ರತಿಷ್ಠಾಪನೆ ವಿಚಾರದಲ್ಲಿ ತಲೆದೋರಿರುವ ಗೊಂದಲದ ಕುರಿತಾಗಿ ದಿನೇಶ್ ಗುಂಡೂರಾವ್ ಕಿಡಿಕಾರಿದ್ದು ‘ನಮ್ಮದೇ ನೆಲದಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪಿಸಲು ರಾಜ್ಯ ಸರ್ಕಾರಕ್ಕೆ ಹಿಂಜರಿಕೆ ಯಾಕೆ..? ಎಂದು ಪ್ರಶ್ನಿಸಿದ್ದಾರೆ.
ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ ದಿನೇಶ್ ಗುಂಡೂರಾವ್, ಕರ್ನಾಟಕದ ಅಸ್ಮಿತೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕರುನಾಡಿನ ಅಸ್ಮಿತೆ ಮತ್ತು ಹೆಮ್ಮೆ. ರಾಜ್ಯ ಸರ್ಕಾರ ಬೆಳಗಾವಿಯ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆಯನ್ನು ಮರು ಪ್ರತಿಷ್ಟಾಪಿಸಲಿ. ನಮ್ಮದೇ ನೆಲದಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪಿಸಲು ರಾಜ್ಯ ಸರ್ಕಾರಕ್ಕೆ ಹಿಂಜರಿಕೆ ಯಾಕೆ..? ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಪೀರನವಾಡಿಯಲ್ಲಿ ಮತ್ತೆ ರಾತ್ರೋರಾತ್ರಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ: ಪರಿಸ್ಥಿತಿ ಉದ್ವಿಗ್ನ
ಪೀರನವಾಡಿಯ ವೃತ್ತದಲ್ಲಿ ತೆರವಾಗಿದ್ದ ಸ್ಥಳದಲ್ಲಿಯೇ ರಾತ್ರೋರಾತ್ರಿಯೇ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಿಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪಿಸಲು ಕೆಲ ಯುವಕರು ಯತ್ನಿಸಿದರು. ಇದು ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಲು ಕಾರಣವಾಗಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.