Advertisement

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

11:35 PM Dec 22, 2024 | Team Udayavani |

ಕಲಬುರಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದೊಂದು ಕ್ರಿಮಿನಲ್‌ ಅಪರಾಧ. ಹೀಗಾಗಿ ತನಿಖೆ ನಡೆಯುತ್ತಿದೆ. ಆದರೆ ಬಿಜೆಪಿಯವರು ನ್ಯಾಯಾಂಗ ತನಿಖೆ ಏಕೆ ಕೇಳುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದವರು. ಅವರ ಬಾಯಲ್ಲಿ ಇಂತಹ ಮಾತು ನಾಚಿಕೆಗೇಡಿತನದ್ದು. ರವಿ ಅಂದಿರುವುದನ್ನು ಇತರ ಸದಸ್ಯರು ಕೇಳಿಸಿಕೊಂಡಿದ್ದಾರೆ. ತುತ್ಛವಾಗಿ ಮಾತಾಡಿರುವುದು ಸತ್ಯ ಎಂದು ತಿಳಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next