Advertisement
ಇದಕ್ಕೆ ಕಾರಣ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡ ಬಳಿಕ ರಾಜ್ಯದಲ್ಲಿ ಜೆಡಿಎಸ್ ಅನುಭವಿಸಿದ ಸಮಸ್ಯೆಗಳು ಮತ್ತು ಪಕ್ಷ ಒಡೆದು ಹೋಗಿರುವುದು. ಹೀಗಾಗಿ ಈ ಮೈತ್ರಿಯನ್ನು ಸರ್ಕಾರದಿಂದ ಹೊರಗೆ ವಿಸ್ತರಿಸುವುದು ಬೇಡ ಎಂಬ ಅಭಿಪ್ರಾಯ ಜೆಡಿಎಸ್‌ನ ಒಂದು ವರ್ಗದಲ್ಲಿ ಕೇಳಿಬಂದಿದೆ. ಈ ವಿಚಾರವನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಗಮನಕ್ಕೂ ತರಲಾಗಿದೆ. ಮುಂದಿನ ನಿರ್ಧಾರ ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಬಿಟ್ಟಿದ್ದು ಎಂದು ಪಕ್ಷದ ಮೂಲಗಳು ತಿಳಿಸಿವೆ.
Related Articles
Advertisement
ಪ್ರಸ್ತುತ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ರಚಿಸಲು ಕಾಂಗ್ರೆಸ್ ಬೇಷರತ್ ಬೆಂಬಲ ಘೋಷಿಸಿದೆಯಾದರೂ ಅದರ ಹಿಂದೆ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡುವ ಬಿಜೆಪಿಯ ಘೋಷಣೆಯನ್ನು ಹತ್ತಿಕ್ಕುವ ಪ್ರಯತ್ನವಿದೆ. ಇದರ ಅರ್ಥ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವುದು. ಆಗ ಮತ್ತೆ ಜೆಡಿಎಸ್ ಒಡೆಯುವ ಪ್ರಯತ್ನಕ್ಕೆ ಕೈಹಾಕುವ ಸಾಧ್ಯತೆ ಇದೆ. ಏಕೆಂದರೆ, 2006ರಲ್ಲಿ ಜೆಡಿಎಸ್ ಒಡೆದು ಕಾಂಗ್ರೆಸ್‌ಗೆ ಹೋದ ಸಿದ್ದರಾಮಯ್ಯ ಅವರೇ ಆ ಪಕ್ಷದ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಜತೆಗೂ ಒಳ್ಳೆಯ ಸಂಬಂಧ ಹೊಂದಿದ್ದಾರೆ. ಹೀಗಾಗಿ ಕಾಂಗ್ರೆಸ್ ಜತೆಗಿನ ಮೈತ್ರಿಯನ್ನು ಸರ್ಕಾರ ರಚನೆಗಷ್ಟೇ ಸೀಮಿತಗೊಳಿಸಬೇಕು. ಯಾವುದೇ ಕಾರಣಕ್ಕೂ ಚುನಾವಣಾ ಹೊಂದಾಣಿಕೆ ಬೇಡ ಎಂದು ಒಂದು ಗುಂಪು ಪಕ್ಷದ ಹಿರಿಯ ನಾಯಕರ ಮುಂದೆ ಬಲವಾಗಿ ವಾದಿಸುತ್ತಿದೆ ಎಂದು ಮೂಲಗಳು ಹೇಳಿವೆ.
ಕಾರಣವೇನು?– ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡ ಬಳಿಕ ರಾಜ್ಯದಲ್ಲಿ ಜೆಡಿಎಸ್ ಅನುಭವಿಸಿದ ಸಮಸ್ಯೆಗಳು
ಮತ್ತು ಪಕ್ಷ ಒಡೆದು ಹೋಗಿರುವುದು. – 2004ರಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ ಒಡೆಯಲು ಮುಂದಾಗಿದೆ ಎಂಬ ಕಾರಣಕ್ಕೆ ಮೈತ್ರಿ ಮುರಿದುಕೊಂಡ ಕುಮಾರಸ್ವಾಮಿ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಿದ್ದರು – ಈ ಹಿಂದೆ ಜನತಾ ಪರಿವಾರ ಒಟ್ಟಾಗಿದ್ದಾಗಲೂ ಅದು ಒಡೆದು ಹೋಳಾಗುವುದರಲ್ಲಿ ಪಕ್ಷದ ನಾಯಕರೊಳಗಿದ್ದ ಭಿನ್ನಮತಕ್ಕೆ ನೀರೆರೆದು ಪೋಷಿಸಿದ್ದು ಇದೇ ಕಾಂಗ್ರೆಸ್ ಎಂಬ ಅಭಿಪ್ರಾಯ ಜೆಡಿಎಸ್ ಸರ್ಕಾರ ರಚಿಸಲು ಕಾಂಗ್ರೆಸ್ ಬೆಂಬಲ ಘೋಷಿಸಿದೆಯಾದರೂ ಅದರ ಹಿಂದೆ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡುವ ಬಿಜೆಪಿಯ ಘೋಷಣೆಯನ್ನು ಹತ್ತಿಕ್ಕುವ ಪ್ರಯತ್ನವಿದೆ. ಇದರ ಅರ್ಥ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವುದು. – ಪ್ರದೀಪ್ ಕುಮಾರ್ ಎಂ.