Advertisement
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಲ ಮನ್ನಾ ವಿಷಯದಲ್ಲಿ ಯಾವ ಪ್ರತಿಷ್ಠೆಯೂ ಇಲ್ಲ. ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು. ಒಂದು ವೇಳೆ, ರೈತರ ಸಾಲ ಮನ್ನಾ ಮಾಡಿದರೆ ಹೋರಾಟ ಕೈಬಿಟ್ಟು ಸಿದ್ದರಾಮಯ್ಯನವರನ್ನು ಅಭಿನಂದಿಸುವುದಾಗಿ ತಿಳಿಸಿದರು. ಅಲ್ಲದೆ, ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡುವ ಬಗ್ಗೆ ಸೂಕ್ತ ಸ್ಥಳದಲ್ಲಿ ಮಾತನಾಡುತ್ತೇನೆ ಎಂದರು. ಬಳಿಕ, ನಗರದ ಕುರಿಮಂಡಿಯಲ್ಲಿ ದಲಿತರೊಂದಿಗೆ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿ, ಜನ ಸಂಪರ್ಕ ಯಾತ್ರೆ ವೇಳೆ ನಿತ್ಯ ದಲಿತರ ಮನೆಯಲ್ಲಿ ಊಟ-ತಿಂಡಿ ಮಾಡುತ್ತಿರುವುದನ್ನು ಸಹಿಸದ ಸಿದ್ದರಾಮಯ್ಯ ಈ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಎಂದಾದರೂ ದಲಿತರ ಮನೆಯಲ್ಲಿ ಊಟ ತಿಂಡಿ ಮಾಡಿದ್ದಾರಾ? ದಲಿತರ ಕಾಲೋನಿಗೆ ಹೋಗಿ ಅವರ ಕಷ್ಟ ಸುಖ ವಿಚಾರಿಸಿದ್ದಾರಾ ಎಂದು ತರಾಟೆಗೆತೆಗದುಕೊಂಡರು.