Advertisement
ನಾವೆಲ್ಲ ಕಲಿತ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ. ಎಷ್ಟೋ ವರುಷದ ನಂತರ ಶಾಲೆಯಲ್ಲಿ ಕಲಿತವರೆಲ್ಲ ಒಟ್ಟು ಸೇರಿದ್ದೆವು. ಒಂದೇ ಮಣೆ ಮೇಲೆ ಕೂತು ಮಗ್ಗಿ ಬಾಯಿಪಾಠ ಮಾಡಿದ, ಅಕ್ಷರ ತಿದ್ದಿದ ನಿರ್ಮಲಾ, ಶರಾವತಿ, ಲಕ್ಷ್ಮಿ, ಅಮೀನಾ ಎಲ್ಲ ಸಿಕ್ಕಿಬಿಟ್ಟರು. ಹಲವರು ಅದೇ ಹಳ್ಳಿಯ ಆಸುಪಾಸಿನಲ್ಲಿ ಸಂಸಾರವಂದಿಗರಾಗಿದ್ದರೆ, ನಾವು ಕೆಲವರಷ್ಟೇ ದೂರದೂರುಗಳ ಸೇರಿದ್ದೆವು. ಎಲ್ಲರಿಗೂ ಖುಷಿಯೋ ಖುಷಿ. ಹೇಳಲಾಗದ ಆನಂದದಲ್ಲಿ ನಮ್ಮ ಮಾತಿನ ಕೊಟ್ಟೆ ಬಿಚ್ಚತೊಡಗಿತು…
“”ಕೆಲ್ಸ ಏನೂ ಇಲ್ಲ ಮಾರಾಯ್ತಿ, ಹಿಂಗೇ ಮನೇಲಿದ್ದೆ…”
“”ಹಿಂಗೇ ಎಲ್ಲಿರ್ತದೆ ಅದು? ಬೀಡಿ ಕಟ್ಟುವುದು, ಮಲ್ಗೆ ಮಾಲೆ ಮಾಡಿ ಮಾರುವುದು, ಸುರಗಿ ಮಕ್ಕೆ, ಕಾಡರಶ¡ ತಂದು ಕಮಿ¤àರಿಗೆ ಹಾಕುವುದು ಏನಾದ್ರು ಮಾಡ್ತನೇ ಇರ್ತದೆ…” ಲಕ್ಷ್ಮಿಯ ಮಾತು.
“”ನೀಯೆಂತ ಕೆಲ್ಸ ಮಾಡ್ತಿದ್ಯೆ ಲಕ್ಷ್ಮಿ?” ದುಬೈಯಿಂದ ಬಂದಿದ್ದ ರೀಟಾ ಕೇಳಿದಳು. “”ಎಂತದೂ ಇಲ್ವೆ. ಎಂಥ ಮಣ್ಣು ಕೆಲ್ಸವೇನೋ ನಮದು. ಬ್ಯಾಸ್ರ ಯಾಕಂದ್ರೆ ಇಷ್ಟಪ ಕೆಲ್ಸ ಮಾಡ್ತಿದ್ರೂ ಮನೆ ಗಂಡಸ್ರ ಕೇಳಿದ್ರೆ ಈ ಹೆಂಗಸ್ರಿಗೆ ಎಂತ ಕೆಲ್ಸ? ನಾವ್ ದುಡ್ಕ ಬಂದಿದ್ನ ಮಾಡ್ಕಂಡ್ ತಿಂಬೂದು ಅಷ್ಟೆಯ ಅಂತ ನಗಾಡು . ಪೋಲಕ ಹೊಲುಸ್ಬೇಕು, ಜಾತ್ರೇಲಿ ಬಳೆ ಇಟ್ಕಬೇಕು ಅಂತ ಗಣಸ್ರ ಹತ್ರ ದುಡ್ ಕೇಳಿದ್ರೆ ನೂರು ಮಾತು.. ಕೆಲಸ ಅಂತ ಕಣ್ಕೆ ಯಾರ್ಗೂ ಕಾಣದೆ ಇರೋ ಕೆಲ್ಸನ ಒಂದೇಸಮ ಮಾಡ್ತಾನೇ ಇದೀವಿ…”
Related Articles
Advertisement
ಯಾಕೆಂದರೆ, ಹೆಣ್ಣುಗಳಿಗೆ ಮನೆವಾರ್ತೆಯ ದುಡಿಮೆ ಎಂದರೆ ಕೊನೆ-ಮೊದಲಿರದ, ವಿರಾಮವಿರದ ಸ್ವಾತಂತ್ರ್ಯಹರಣ. ಅದು ರಜೆಯಿರದ, ವೇತನವಿರದ, ವಿರಾಮವೂ ಇರದ ಹೇರಲ್ಪಟ್ಟ ದುಡಿಮೆ. ಆ ದುಡಿಮೆ ಅವರಿಗೆ ಗೌರವ ತರುತ್ತಿಲ್ಲ, ಅಧಿಕಾರ ನೀಡುತ್ತಿಲ್ಲ, ಸ್ವಾತಂತ್ರ್ಯ ನೀಡುತ್ತಿಲ್ಲ. ಬದಲಾಗಿ ಗೌರವ, ಅಧಿಕಾರ, ಸ್ವಾತಂತ್ರ್ಯ ಎಲ್ಲಕ್ಕೂ ಎರವಾಗಿದೆ. ಹೆಣ್ಣುತನವನ್ನು ಸಾಬೀತುಪಡಿಸುವುದೇ ಮನೆಯೊಳಗಿನ ಉಚಿತ ದುಡಿಮೆ ಎನ್ನಲಾಗುತ್ತದೆ.
ಕಾಣದ ಕೆಲಸ, ಕೇಳದ ಕಥೆ…ಕಾಯಕವೇ ಶ್ರೇಷ್ಠ, ಕಾಯಕವೇ ಧರ್ಮ ಎಂದ ಶರಣರ ನೆಲ ನಮ್ಮದು. “ಅನ್ನ ಶ್ರಮ’ ಎನ್ನುತ್ತಿದ್ದರು ಗಾಂಧೀಜಿ. “ವಸ್ತುವಿನ ತಯಾರಿಕೆಯ ಹಿಂದೆ ರಕ್ತ, ಬೆವರು, ಕಣ್ಣೀರು ಇರುತ್ತದೆ. ಅದನ್ನು ಅದೃಶ್ಯವಾಗಿಸಿ ಸರಕಿಗೆ ಮೌಲ್ಯ ತುಂಬಲಾಗುತ್ತದೆ’ ಎಂದ ಕಾರ್ಲ್ ಮಾರ್ಕ್ಸ್. ಕೆಲಸದ ಮೇಲುಕೀಳು ವಿಭಜನೆಯಿಂದ ಹುಟ್ಟಿದ ಜಾತಿವ್ಯವಸ್ಥೆಯನ್ನೇ ಅಂಬೇಡ್ಕರರು ನಿರಾಕರಿಸಿದರು. ಶ್ರಮದ ಮಹತ್ವದ ಬಗೆಗೆ ಎಲ್ಲ ಮಹಾನುಭಾವರೂ ತಿಳಿಸಿ ಹೇಳಿದರು. ಆದರೂ ಮನೆವಾರ್ತೆಯ ಶ್ರಮ ಕೀಳೆನಿಸಿಕೊಂಡು ಕೇವಲ ಹೆಣ್ಣುಗಳ ಹೆಗಲ ವಜ್ಜೆಯಾಗಿಸಿತು. ಅವರ ಕೆಲಸವೆಲ್ಲ ವೇತನರಹಿತ, ಉಚಿತ, ಕಡ್ಡಾಯ ಸೇವೆಯೇ ಆಯಿತು. ಒಂದು ಅಧ್ಯಯನದಂತೆ ಪ್ರತಿಹೆಣ್ಣೂ ಪ್ರತಿದಿನ ವೇತನವಿರದ 297 ನಿಮಿಷ ಸೇವೆಯ ಕೆಲಸ ಮಾಡಿದರೆ, ಪ್ರತಿ ಗಂಡೂ 31 ನಿಮಿಷ ಅಂತಹ ಕೆಲಸ ಮಾಡುತ್ತಾನೆ. ಎಂದರೆ ಪ್ರತಿ ಮನೆಯೂ ಮನೆಯಾಗಿರುವುದರ ಹಿಂದೆ ಕನಿಷ್ಠ ಒಬ್ಬಳ “ರಕ್ತ, ಬೆವರು, ಕಣ್ಣೀರು’ ಇದೆ. ಹತ್ತುಹಲವು ನಿರೀಕ್ಷೆಗಳಿಗೆ ತಕ್ಕವಳಾಗಿ ಬದುಕಲು ಹಲವಾರು ಕೆಲಸಗಳನ್ನು ಒಮ್ಮೆಗೇ ಮಾಡಬೇಕಾದ ಬಲವಂತ ಮತ್ತು ಅನಿವಾರ್ಯತೆ ಹೆಣ್ಣುಗಳ ಮೇಲಿದ್ದರೂ, ಅದು “ಮಲ್ಟಿಟಾಸ್ಕಿಂಗ್’ ಎಂಬ ಬಿರುದಿಗೆ ಪಾತ್ರವಾಗಿದೆ. ಆದರೆ, ಹೆಣ್ಣು ಬದುಕಿನ ಗುಣಾತ್ಮಕತೆಯನ್ನು ಅದೇ ಕಡಿಮೆ ಮಾಡಿದೆ. ಕೆಲಸದ ಸ್ಥಳದಲ್ಲೂ ಮಹಿಳೆಗೆ ಎರಡನೆಯ ದರ್ಜೆ ಸ್ಥಾನ, ಅಪಾಯಗಳೇ ಹೆಜ್ಜೆಹೆಜ್ಜೆಗೂ ಎದುರಾಗುತ್ತವೆ. ಮನೆಯಾಚೆಗೂ ದುಡಿದು ಗಳಿಸುತ್ತಿದ್ದರೂ ಮನೆಗೆ ಬಂದನಂತರ ವಿರಾಮ ಮರೀಚಿಕೆ. ಅತಿಶ್ರಮದ ಅನುಭವಗಳು ಹೆಣ್ಣುಜನ್ಮ ಕೀಳು, ಹೆಣ್ಣು ಜನ್ಮ ಬೇಡ ಎಂದು ಹೆಣ್ಣುಗಳೇ ಹೇಳುವಂತೆ ಮಾಡಿವೆ. ಎಚ್. ಎಸ್. ಅನುಪಮಾ ಫೊಟೊ : ಶಮಂತ್ ಪಾಟೀಲ್