Advertisement
ರಾಜ್ಯದಲ್ಲಿ ಪದವಿ ಶಿಕ್ಷಣ ಹಂತದಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ಸರಕಾರಕ್ಕೆ ಈ ರೀತಿ ಪ್ರಶ್ನಿಸಿದೆ.
Related Articles
Advertisement
ಇದನ್ನೂ ಓದಿ:ಶಿಕ್ಷಣದಲ್ಲಿ ರಾಜಕೀಯ ಏಕೆ ತರುತ್ತೀರಿ : ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಅಂತಿಮವಾಗಿ ಅಡ್ವೊಕೇಟ್ ಜನರಲ್ ವಾದ ಮಂಡಿಸಲಿದ್ದಾರೆ ಎಂಬ ಸರಕಾರದ ಪರ ವಕೀಲರ ಮನವಿ ಪುರಸ್ಕರಿಸಿದ ನ್ಯಾಯಪೀಠ ವಿಚಾರಣೆಯನ್ನು ನ. 15ಕ್ಕೆ ಮುಂದೂಡಿತು.
ಸರಕಾರದ ಸಮರ್ಥನೆಉನ್ನತ ಶಿಕ್ಷಣದಲ್ಲಿ ಕೇವಲ 6 ತಿಂಗಳ ಕಾಲ ಪ್ರಾಥಮಿಕ ಕನ್ನಡ ಕಲಿಸಲಾಗುವುದು. ಸಣ್ಣ ಪುಟ್ಟ ಕನ್ನಡ ಪದ ಕಲಿಯಲು ಹೇಳಿ ಕೊಡಲಾಗುತ್ತದೆಯಷ್ಟೇ. ಇದು ಕನ್ನಡ ಕಲಿಕೆಯನ್ನು ಪ್ರೋತ್ಸಾಹಿಸುವ ವಿಧಾನ. ರಾಜ್ಯದಲ್ಲಿ ನೆಲೆಸುವವರಿಗೆ ಸ್ಥಳೀಯರೊಂದಿಗೆ ಸಂವಾದ ನಡೆಸಲು ಅನುಕೂಲವಾಗುವಷ್ಟು ಕನ್ನಡ ಕಲಿಸಲಾಗುತ್ತದೆ. ಈ ಕ್ರಮವನ್ನು ಉಷಾ ಮೆಹ್ತಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅನುಮೋದಿಸಿದೆ ಎಂದು ಸರಕಾರದ ಪರ ವಕೀಲರು ಸಮರ್ಥಿಸಿಕೊಂಡರು. 10 ವರ್ಷಗಳಿಂದ ಎಂಜಿನಿಯರ್ ವ್ಯಾಸಂಗದಲ್ಲಿ ಕನ್ನಡ ಕಲಿಕೆ ಇದೆ. ಇದು 10ನೇ ತರಗತಿ ಅನಂತರ ಕನ್ನಡ ಕಲಿಯ ದವರಿಗೆ ಅನುಕೂಲಕರ. ಈ ವಿಧಾನ ಯಶಸ್ವಿಯೂ ಆಗಿದೆ ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.