ಶಿವಮೊಗ್ಗ: ಡಿ ಕೆ ಶಿವಕುಮಾರ್ ಅವರ ಫೋನ್ ಟ್ಯಾಪ್ ಮಾಡಿ ದೇಶದಲ್ಲಿ ಏನು ಉದ್ಧಾರ ಮಾಡಬೇಕು ನನಗೆ ಅರ್ಥ ಅಗುತ್ತಿಲ್ಲ. ಡಿ.ಕೆ.ಶಿವಕುಮಾರ್ ಎನು ಕಡಿದು ಗುಡ್ಡೆ ಹಾಕಿದ್ದಾರೆ ಎಂದು ಪೋನ್ ಟ್ಯಾಪ್ ಮಾಡುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕೆ ಮಾಡಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರ ಸರ್ಕಾರದಿಂದ ಫೋನ್ ಕದ್ದಾಲಿಕೆ ಆರೋಪಕ್ಕೆ ತಿರುಗೇಟು ನೀಡಿದರು.
ಡಿಕೆ ಶಿವಕುಮಾರ್ ಅವರು ಕೇವಲ ಪ್ರಚಾರ ತಂತ್ರ ಮಾಡುತ್ತಿದ್ದಾರೆ. ಅದರ ಮೂಲಕ ದೊಡ್ಡವರಾಗಲು ನೋಡಿದ್ದಾರೆ. ಅವರ ಫೋನ್ ಟ್ಯಾಪ್ ಅಗುತ್ತಿಲ್ಲ. ಅರ್ಥವಿಲ್ಲದ ಹೇಳಿಕೆ ಹಾಗೂ ಆರೋಪ ಎಂದರು.
ಇದನ್ನೂ ಓದಿ:ಡಿ ಕೆ ಶಿವಕುಮಾರ್ ಅವರಿಗೆ ಕೋವಿಡ್-19 ಸೋಂಕು ದೃಢ: ಖಾಸಗಿ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ಪಕ್ಷದ ನಾಯಕ ಸ್ಥಾನ ಒಡೆದ ಕನ್ನಡಿಯಂತೆ ಅಗಿದೆ. ಒಮ್ಮೆ ಒಡೆದ ಕನ್ನಡಿ ಮತ್ತೆ ಸೇರುವುದಕ್ಕೆ ಸಾಧ್ಯವಿಲ್ಲ. ಅದು ಚೂರು ಚೂರಾಗಿ ಹೋಗಿದೆ. ಪಕ್ಷದ ನಾಯಕರ ವಿರುದ್ಧ ಹಿರಿಯ ನಾಯಕರುಗಳೇ ಪತ್ರ ಬರೆಯುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವ ಇಲ್ಲ, ಸಿದ್ದಾಂತ ಹಾಗೂ ಸಂಘಟನೆಯ ಕಾರ್ಯಕರ್ತರ ಗುಂಪು ಇಲ್ಲ ಎಂದರು.
ಇದನ್ನೂ ಓದಿ: ಸಾಯುವವರೆಗೂ ಕಾಂಗ್ರೆಸ್ ನಲ್ಲೇ ಇರುತ್ತೇವೆ, ಬಿಜೆಪಿಯ ಪ್ರಶ್ನೆಯೇ ಇಲ್ಲ: ಭಾವುಕರಾದ ಮೊಯ್ಲಿ
ಬಿಜೆಪಿಯಲ್ಲಿ ಕಾರ್ಯಕರ್ತರ ಪಡೆಯಿದ್ದು, ಸೈದಾಂತಿಕವಾಗಿ ದೇಶ ಮುನ್ನೆಡಸುವ ಗುರಿ ಎಲ್ಲರ ಮುಂದಿದೆ. ಹಾಗಾಗಿಯೇ ಇಂದು ಎಲ್ಲರೂ ಬಿಜೆಪಿ ಪಕ್ಷಕ್ಕೆ ಬಂದು ಸೇರುತ್ತಿದ್ದಾರೆ. ಕರ್ನಾಟಕದಲ್ಲಿ ಪ್ರಾಮಾಣಿಕ ಸೇವೆ ಮಾಡಿದ್ದ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿ ಸೇರಿದ್ದಾರೆ. ಅವರು ಬಿಜೆಪಿ ಸೇರಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಸಚಿವ ಈಶ್ವರಪ್ಪ ಹೇಳಿದರು.