Advertisement

ನಾನ್ಯಾಕೆ ಸಿದ್ದರಾಮಯ್ಯ ಬಗ್ಗೆ ಮಾತಾಡಿ ಹಗುರ ಆಗಬೇಕು ಬಿಎಸ್ ವೈ

05:53 PM Aug 20, 2022 | Team Udayavani |

ಬೆಂಗಳೂರು : ನಾನು ಸಿದ್ದರಾಮಯ್ಯ ಬಗ್ಗೆ ಮಾತನಾಡುವುದಿಲ್ಲ, ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ. ನಾನ್ಯಾಕೆ ಅವರ ಬಗ್ಗೆ ಟೀಕೆ ಮಾಡಿ ಹಗುರ ಆಗಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

Advertisement

ನಿರ್ಮಲಾನಂದ ಶ್ರೀಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶ್ರೀಗಳ ಅವರ ಆಶೀರ್ವಾದ ಪಡೆಯಲು ಬಂದಿದ್ದೆ. ಸುದೀರ್ಘವಾಗಿ ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದೇನೆ. ನಾವು ಏನೇನು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ ಎಂದೂ ತಿಳಿಸಿದ್ದೇನೆ. ಶ್ರೀಗಳಿಂದ ಅನೇಕ ಸಲಹೆಗಳನ್ನು ಪಡೆದುಕೊಂಡಿದ್ದೇನೆ ಎಂದರು.

ಅಪ್ಪಚ್ಚು ರಂಜನ್ ಬೆಂಬಲಿಗ ಸಿದ್ದರಾಮಯ್ಯ ಅವರತ್ತ ಮೊಟ್ಟೆ ಎಸೆದ ಆರೋಪ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಮೊಟ್ಟೆ ಎಸೆದವರು ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದಾರೆ ಎಂದರು.

ಇದನ್ನೂ ಓದಿ: ಬಿಜೆಪಿ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ ಮಾಡುತ್ತದೆ: ಸಿದ್ದರಾಮಯ್ಯ

 

Advertisement
Advertisement

Udayavani is now on Telegram. Click here to join our channel and stay updated with the latest news.

Next