Advertisement

Yadagiri ಶಾಸಕರನ್ನೇಕೆ ಇನ್ನೂ ಬಂಧಿಸಿಲ್ಲ ? ಎನ್‌. ರವಿಕುಮಾರ್‌

11:26 PM Sep 15, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಪ್ರಶ್ನಿಸಿದರು.

Advertisement

ಮಾಧ್ಯಮ ಪ್ರತಿನಿಧಿಗಳ ಜತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ರಚಿಸುತ್ತಿದೆ. ಜಾತ್ಯತೀತ, ಪ್ರಜಾಪ್ರಭುತ್ವವಾದಿ, ಸಂವಿಧಾನ ಯಥಾವತ್‌ ಜಾರಿಗೊಳಿಸುವ ಸರಕಾರ ಎಂದು ಕಾಂಗ್ರೆಸ್ಸಿಗರು ಹೇಳಿಕೊಳ್ಳುತ್ತಾರೆ. ಆದರೆ ರಾಜ್ಯದಲ್ಲಿ ಸಂವಿಧಾನವನ್ನು ಜಾರಿ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದರು.

ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ದೌರ್ಜನ್ಯ ತಡೆ ಪ್ರಕರಣ ದಾಖಲಿಸಿ, ಬಂಧಿಸಿದ್ದೀರಿ. ಆದರೆ 1 ತಿಂಗಳಿಗೂ ಹಿಂದೆ ಇದೇ ದೌರ್ಜನ್ಯ ತಡೆ ಕಾಯ್ದೆಯಡಿ ಯಾದಗಿರಿಯಲ್ಲಿ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ವಿರುದ್ಧವೂ ಪ್ರಕರಣ ದಾಖಲಾಗಿದೆ. ಒಂದು ತಿಂಗಳಾದರೂ ಚನ್ನಾರೆಡ್ಡಿ ಬಂಧನ ಆಗಿಲ್ಲ. ಇದಾ ನಿಮ್ಮ ಪ್ರಜಾಪ್ರಭುತ್ವ? ಮಾನ್ಯ ಸಿದ್ದರಾಮಯ್ಯನವರೇ ಎಂದು ಖಾರವಾಗಿ ಪ್ರಶ್ನಿಸಿದರು.

“ಹಿಂದೂಗಳಿಗೊಂದು, ಮುಸ್ಲಿಮರಿಗೊಂದು ನ್ಯಾಯ’
ಬೆಂಗಳೂರು: ನಾಗಮಂಗಲದಲ್ಲಿ ಗಣಪತಿ ಹಬ್ಬ ಮಾಡುವ, ಮೆರವಣಿಗೆ ಹೋಗುವ ಹಿಂದೂ ಯುವಕರ ಮೇಲೆ ನೂರಾರು ಕಲ್ಲು ಎಸೆದುದ್ದಲ್ಲದೆ ಗಣಪತಿ ಮೂರ್ತಿ ಮೇಲೆ ಚಪ್ಪಲಿ ಎಸೆದಿದ್ದಾ ರೆ. ಹಿಂದೂಗಳ ಮೇಲೆ ಲಾಠಿ ಚಾರ್ಜ್‌, ಕಲ್ಲೆಸೆತ ಆಗಿದೆ. ಹಿಂದೂಗಳ ಹತ್ತಾರು ಅಂಗಡಿ ಸುಟ್ಟಿದ್ದಾರೆ. ಆದರೆ ಹಿಂದೂಗಳನ್ನೇ ಪ್ರಮುಖ ಆರೋಪಿಗಳನ್ನಾಗಿ ಮಾಡಿ ಕೇಸು ಹಾಕಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಆಕ್ಷೇಪಿಸಿದರು.

ಇದು ರಾಜ್ಯದ ಪ್ರಜಾಪ್ರಭುತ್ವವೇ? ಹಿಂದೂಗಳಿಗೆ ಒಂದು ರೀತಿ, ಮುಸಲ್ಮಾನರಿಗೆ ಇನ್ನೊಂದು ನೀತಿ- ಇದು ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ ಎಂದು ಟೀಕಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next