Advertisement

ವಿಧವಾ ವೇತನ ಯೋಜನೆ : ಯೋಜನೆ ಉದ್ದೇಶ

10:25 PM Nov 20, 2022 | Team Udayavani |

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಹಲವು ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿಯೇ ಇರುವುದಿಲ್ಲ. ಎಷ್ಟೋ ಯೋಜನೆಗಳು ಮಾಹಿತಿ ಇದ್ದವರ ಅಥವಾ ಪ್ರಭಾವಿಗಳ ಪಾಲಾಗುತ್ತವೆ. ಕೆಲವು ಸಂದರ್ಭಗಳಲ್ಲಿ ಅಗತ್ಯವಿರುವ ಜನರಿಗೆ ಈ ಮಾಹಿತಿಗಳು ತಲುಪುವುದೇ ಇಲ್ಲ. ಅರ್ಹರಿಗೆ ವಿವಿಧ ಯೋಜನೆಗಳ ಪ್ರಯೋಜನ ಸಿಗಬೇಕೆನ್ನುವ ಉದ್ದೇಶದಿಂದ ಈ “ಪ್ರಯೋಜನ’ ಅಂಕಣ.

Advertisement

18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ನಿರ್ಗತಿಕ ವಿಧವೆಯರಿಗೆ ವಿಧವಾ ವೇತನವನ್ನು ಸರಕಾರದ ಆದೇಶದ ಮೇರೆಗೆ 1ನೇ ಎಪ್ರಿಲ್‌ 1984ರಿಂದ ಕಾರ್ಯಗತ ಮಾಡಲಾಗಿದೆ.
ಪಿಂಚಣಿ ಮೊತ್ತ: 800 ರೂ. ಪರಿಷ್ಕೃತ ಆದೇಶ: 31-07-21

ಫ‌ಲಾನುಭವಿಗಳಿಗೆ ಇರಬೇಕಾದ ಅರ್ಹತೆ
18 ವರ್ಷ ಮೇಲ್ಪಟ್ಟ ವಿಧವೆಯರು

ನಿರ್ಗತಿಕ ವಿಧವೆ ಅಂದರೆ ಪತಿಯ ಜೀವಿಸಿಲ್ಲದ ಅಥವಾ ಕಾನೂನು ರೀತ್ಯಾ ಮೃತಪಟ್ಟಿರುವನೆಂದು ಭಾವಿಸುವವನ ಪತ್ನಿ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶಗಳಲ್ಲಿ ರೂ.12,000/- ಹಾಗೂ ನಗರ ಪ್ರದೇಶಗಳಲ್ಲಿ ರೂ.17,000/- ಕ್ಕಿಂತ ಕಡಿಮೆ ಇರಬೇಕು.

ಅರ್ಜಿದಾರಳು ಅಥವಾ ಆಕೆಯ ಮರಣ ಹೊಂದಿದ ಪತಿಯು ಅರ್ಜಿ ದಿನಾಂಕದಿಂದ ಹಿಂದಿನ ನಿರಂತರ 3 ವರ್ಷಗಳ ಅವಧಿಗೆ ಕಡಿಮೆ ಇಲ್ಲದಂತೆ ಈ ರಾಜ್ಯದ ನಿವಾಸಿಯಾಗಿಬೇಕು.
ವಿಧವಾ ವೇತನಕ್ಕಾಗಿ ಸಲ್ಲಿಸುವ ಅರ್ಜಿಯು ಗೊತ್ತುಪಡಿಸಿದ ನಮೂನೆಯಲ್ಲಿರಬೇಕು ಮತ್ತು ಅದನ್ನು ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರಿಗೆ ಸಲ್ಲಿಸಬೇಕು. ಬೇರೆ ಪಿಂಚಣಿ ಪಡೆಯುತ್ತಿರುವವರು ವಿಧವಾ ವೇತನಕ್ಕೆ ಅರ್ಹರಾಗುವುದಿಲ್ಲ.

Advertisement

ಮೃತರಾಗುವ ವರೆಗೆ ಅಥವಾ ಪುನರ್‌ ವಿವಾಹವಾಗುವವರೆಗೆ ಅಥವಾ ಉದ್ಯೋಗ ಪಡೆದು ನಿಗದಿತ ವಾರ್ಷಿಕ ಆದಾಯಕ್ಕಿಂತ ಹೆಚ್ಚಿನ ಆದಾಯ ಪಡೆಯುವವರೆಗೆ ವಿಧವಾ ವೇತನ ಪಡೆಯಬಹುದು.

ಜನನ ಪ್ರಮಾಣ ಪತ್ರ, ವೈದ್ಯಕೀಯ ದೃಢೀಕ ರಣ ಪತ್ರ ಅಥವಾ ಭಾರತ ಚುನಾವಣ ಆಯೋಗವು ನೀಡಿರುವ ಮತದಾರರ ಗುರುತಿನ ಚೀಟಿಯಲ್ಲಿರುವ ಜನ್ಮ ದಿನಾಂಕವು ವಯಸ್ಸಿಗೆ ಸಂಬಂಧಿಸಿದ ದಾಖಲೆಯಾಗಿರುತ್ತದೆ.

ಸಲ್ಲಿಸಬೇಕಾದ ದಾಖಲೆಗಳು
ಆಧಾರ್‌ ಕಾರ್ಡ್‌ ಪ್ರತಿ, ಆದಾಯ, ವಿಳಾಸ, ಪತಿಯ ಮರಣ ದೃಢೀಕರಣ ಪತ್ರ ಹಾಗೂ ಬ್ಯಾಂಕ್‌/ಅಂಚೆ ಖಾತೆ ಪ್ರತಿ, ವಯಸ್ಸಿನ ದೃಢೀಕರಣ ಪತ್ರ

ವಯೋಮಿತಿ: 18ರಿಂದ 39 ವರ್ಷ:
ಕೇಂದ್ರದ ಪಾಲು ಶೂನ್ಯ, ರಾಜ್ಯದ ಪಾಲು 800, ಒಟ್ಟು 800 ರೂ.
40ರಿಂದ 79 ವರ್ಷ: ಕೇಂದ್ರದ ಪಾಲು 300, ರಾಜ್ಯದ ಪಾಲು 500, ಒಟ್ಟು 800 ರೂ.

ಯೋಜನೆ ಉದ್ದೇಶ: ನಿರ್ಗತಿಕ ವಿಧವೆಯರಿಗೆ ಆರ್ಥಿಕ ಸಹಾಯ ಒದಗಿಸುವುದು

ಅರ್ಜಿ ಸಲ್ಲಿಸುವುದು ಹೇಗೆ?
ಆಯಾ ವ್ಯಾಪ್ತಿಯ ನಾಡ ಕಚೇರಿ, ತಾಲೂಕು ತಹಶೀಲ್ದಾರ್‌ ಕಚೇರಿಗಳಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು ಅಥವಾ (//www.nadakacheri.karnataka.gov.in) ವೆಬ್‌ಸೈಟ್‌ಗೆ ಭೇಟಿ ನೀಡಿ ಲಾಗಿನ್‌ ಆಗಿ ದಾಖಲೆ ನಮೂದಿಸಿ ಅರ್ಜಿ ಸಲ್ಲಿಸಬಹುದು ಹಾಗೂ 72 ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ ಯೋಜನೆಯ ಸಹಾಯವಾಣಿ 155245 ಸಂಖ್ಯೆಗೆ ಕರೆ ಮಾಡಬಹುದು.

Advertisement

Udayavani is now on Telegram. Click here to join our channel and stay updated with the latest news.

Next