ಬೆಂಗಳೂರು: ಕೆಲ ಹೋರಾಟಗಾರರು ನಮ್ಮ ಕುಟುಂಬ ರಾಜಕಾರಣದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಮ್ಮ ಕುಟುಂಬದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಈಗ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ. ನಾನು ರಾಜಕಾರಣಕ್ಕೆ ಬರದೇ ಇದ್ದಿದ್ದರೆ ಇಂದು ನಮ್ಮ ಪಕ್ಷ ಇರುತ್ತಿರಲಿಲ್ಲ. ಪಕ್ಷ ಉಳಿಸಿಕೊಳ್ಳಲು ನನ್ನ ಪತ್ನಿಯನ್ನು ಚುನಾವಣಾ ಕಣಕ್ಕಿಳಿಸಬೇಕಾಯಿತು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಮುಂದಿನ ಚುನಾವಣೆಗೆ ಅವರನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಕ್ಷವನ್ನು ಉಳಿಸಿಕೊಳ್ಳಲು ಕುಟುಂಬದವರು ಕೆಲವರು ರಾಜಕೀಯಕ್ಕೆ ಬಂದಿದ್ದಾರೆ ನಿಜ, ಅದರ ಹೊರತಾಗಿ ಯಾವ ಕಾರ್ಯಕರ್ತರನ್ನೂ ಹರಕೆಯ ಕುರಿ ಮಾಡಿಲ್ಲ. ನನಗೆ ಕುಟುಂಬ ವ್ಯಾಮೋಹಕ್ಕಿಂತಲೂ ರಾಜ್ಯದ ಮೇಲೆ ವ್ಯಾಮೋಹ, ಪ್ರೀತಿ ಹೆಚ್ಚು ಎಂದು ಎಚ್‌ಡಿಕೆ ಹೇಳಿದರು.
ಇದನ್ನೂ ಓದಿ:ರಾಜ್ಯದಲ್ಲಿ 5,339 ಹೊಸ ಪ್ರಕರಣ ಪತ್ತೆ, 48ಮಂದಿ ಸಾವು: ಪಾಸಿಟಿವ್ ದರ ಶೇ.4.14ಕ್ಕೆ ಇಳಿಕೆ
ಕನ್ನಡಿಗರ ಸರಕಾರ ಬರಲಿ: ಬುಧವಾರ ಬೆಂಗಳೂರಿನ ಪುರಭವನದಲ್ಲಿ ಕನ್ನಡಪರ ಹೋರಾಟಗಾರರ ಜತೆ ಮುಕ್ತ ಮಾತುಕತೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯದ ಸಮಗ್ರ ಅಭಿವೃದ್ಧಿಗೆ ಕನ್ನಡಪರ ಹೋರಾಟಗಾರರು ವಿಧಾನ ಮಂಡಲ ಪ್ರವೇಶ ಮಾಡಬೇಕು 2023ರಲ್ಲಿ ಕರ್ನಾಟಕದಲ್ಲಿ ಕನ್ನಡಿಗರ ಸರಕಾರ ಅಧಿಕಾರಕ್ಕೆ ಬರಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.