Advertisement

Suḷya: ಕಾಡು ಹಂದಿ ದಾಳಿ; ರಬ್ಬರ್‌ ಟ್ಯಾಪಿಂಗ್‌ ಕಾರ್ಮಿಕೆಗೆ ತೀವ್ರ ಗಾಯ

08:54 PM Feb 22, 2024 | Team Udayavani |

ಸುಳ್ಯ: ಟ್ಯಾಪಿಂಗ್‌ ಮಾಡಲು ರಬ್ಬರ್‌ ತೋಟಕ್ಕೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ಮಾಡಿ ತೀವ್ರ ಗಾಯಗೊಳಿಸಿದ ಘಟನೆ ಸುಳ್ಯ ತಾಲೂಕಿನ ದುಗಲಡ್ಕ ಕೂಟೇಲು ಎಂಬಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

Advertisement

ಕೂಟೇಲು ನಿವಾಸಿ ಪದ್ಮಾವತಿ ಅವರು ದುಗಲಡ್ಕ ವಿಭಾಗದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದಾಗ ಪೊದೆಯಲ್ಲಿದ್ದ ಕಾಡುಹಂದಿ ಏಕಾಏಕಿ ಇವರ ಮೇಲೆ ದಾಳಿ ನಡೆಸಿದೆ. ದಾಳಿಯಿಂದ ಮಹಿಳೆಯ ಬೆನ್ನು ಹಾಗೂ ದೇಹದ ವಿವಿಧ ಭಾಗಕ್ಕೆ ತೀವ್ರ ಗಾಯಗಳಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next