Advertisement
ಇದೇ ರೀತಿ ಕಳೆದೆರಡು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆ ಪ್ರದೇಶದ ಚುನಾವಣೆಯ ಮತಗಟ್ಟೆ ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ಒಂಟಿ ಸಲಗ ಪ್ರತ್ಯಕ್ಷವಾಗಿ ಭಯಬೀತಿ ಉಂಟುಮಾಡಿದ ಘಟನೆ ನಡೆದಿದೆ.
ಸುಮಾರು 15 ಕಿ.ಮೀ. ಒಳ ಭಾಗದಲ್ಲಿದೆ. ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಮಂಗಳೂರು ಬಸ್ ಸಂಚಾರದಲ್ಲಿ ವ್ಯತ್ಯಯ
Related Articles
Advertisement
ಇದರ ಪರಿಶೀಲನೆಗಾಗಿ ಚುನಾವಣಾಧಿಕಾರಿ ರಘು, ಸಹಾಯಕ ಚುನಾವಣಾಧಿಕಾರಿ ಅಜಿತ್, ನೆರಿಯ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹಾಗೂ ಸಿಬಂದಿಗಳು ಬಾಡಿಗೆ ವಾಹನ ಮೂಲಕ ತೆರಳಿದ್ದರು.
ಮಧ್ಯಾಹ್ನ 1.35 ಕ್ಕೆ ಹೊರಟು ವಾಪಾಸಾಗುತ್ತಿದ್ದಾಗ, ಏನೆಪೋಯ ವಿದ್ಯುತ್ ಘಟಕದ ಡ್ಯಾಂ ಬಳಿ ಒಂಟಿ ಸಲಗ ಎದುರಾಗಿದೆ.
ಒಂಟಿ ಸಲಗ ಕಂಡು ಸಮೀಪದ ಕಿರು ರಸ್ತೆಯಲ್ಲಿ ಚಾಲಕ ವಾಹನನ್ನು ತಿರುವು ಹಾಕಿದ್ದರು. ಸುಮಾರು 2.15ರಿಂದ 3.15 ರವರೆಗೆ ಆನೆ ಹಾದು ಹೋಗುವವರೆಗೆ ಸ್ಥಳದಲ್ಲೇ ಅಧಿಕಾರಿಗಳು ಉಳಿಯುವಂತಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಪಿಡಿಒ ಗಾಯತ್ರಿ ಉದಯವಾಣಿಗೆ ತಿಳಿಸಿದ್ದಾರೆ.