Advertisement
ಒಂದು ವಾರದಿಂದ ಈ ಭಾಗದಲ್ಲಿ ಮರಿಯಾನೆಗಳೊಂದಿಗೆ ಗಂಡಾನೆ ಹಾಗೂ ಹೆಣ್ಣಾನೆ ಸಂಚರಿಸುತ್ತಿದ್ದು, ಮುಖ್ಯ ರಸ್ತೆಯ ಮೂಲಕ ಗದ್ದೆ, ತೋಟಗಳಿಗೆ ಲಗ್ಗೆ ಇಡುತ್ತಿವೆ.
ಸಂಜೆಯಾಗುತ್ತಲೇ ರಸ್ತೆಗಳಲ್ಲಿ ಕಾಡಾನೆ ಗಳ ಹಿಂಡಿನ ಸಂಚಾರ ಕಂಡು ಬರುತ್ತಿದ್ದು, ಶಾಲೆ ಬಿಟ್ಟು ಮನೆಗೆ ಬರುವ ಮಕ್ಕಳು, ಕಾರ್ಮಿಕರು ಭಯ ಗೊಂಡಿ ದ್ದಾರೆ. ಅತ್ತಿಮಂಗಲದಿಂದ ಒಂಟಿಯಂಗಡಿ ವರೆಗೆ ಬೀದಿದೀಪ ಗಳಿಲ್ಲ. ಕಾರ್ಗತ್ತಲಿನಲ್ಲಿ ಕಾಡಾನೆಗಳು ಸಂಚರಿ ಸುವಾಗ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
Related Articles
Advertisement