ಸುಬ್ರಹ್ಮಣ್ಯ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿವೆ.
Advertisement
ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ ಮರಿ ಆನೆಯೊಂದಿಗೆ ದೊಡ್ಡ ಆನೆ ಸಂಚರಿಸುತ್ತಿರುವುದನ್ನು ಸ್ಥಳೀಯರು ಕಂಡಿರು ವುದಾಗಿ ತಿಳಿಸಿದ್ದಾರೆ. ಆನೆಗಳು ಸಾಗುತ್ತಿರುವ ವೀಡಿಯೋ ವೈರಲ್ ಆಗಿದೆ.