ಸುಬ್ರಹ್ಮಣ್ಯ: ಕಡಬ ತಾಲೂಕಿನಲ್ಲಿ ಮತ್ತೆ ಕಾಡಾನೆ ದಾಳಿ ಪ್ರಕರಣ ನಡೆದಿದೆ. ಘಟನೆಯಲ್ಲಿ ವ್ಯಕ್ತಿಯೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಇಂದು ಅಪರಾಹ್ನ ಸಂಭವಿಸಿದೆ. ವಿಜುಕುಮಾರ್ ಗಾಯಗೊಂಡ ವ್ಯಕ್ತಿ. ಕೆಲಸಕ್ಕೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ಗಾಯಗೊಂಡ ವಿಜುಕುಮಾರ್ ಅವರನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಬಜರಂಗದಳ, ಆರ್ ಎಸ್ಎಸ್ ಬ್ಯಾನ್ ಮಾಡುತ್ತೇವೆಂದು ಎಲ್ಲೂ ಹೇಳಿಲ್ಲ: Laxmi hebbalkar
Related Articles
ಪರಿಸರದಲ್ಲಿ ಎರಡು ಆನೆಗಳು ಇರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಲಭ್ಯವಾಗಿದೆ. ಗ್ರಾಮಸ್ಥರು, ಸುಬ್ರಹ್ಮಣ್ಯ-ಧರ್ಮಸ್ಥಳ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಕೆಲ ತಿಂಗಳ ಹಿಂದೆ ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಬಲಿಯಾಗಿದ್ದರು. ಆ ಬಳಿನ ಕಾಡಾನೆ ಸೆರೆ ಕಾರ್ಯಾಚರಣೆ ನಡೆಸಿ ಒಂದು ಆನೆಯನ್ನು ಸೆರೆ ಹಿಡಿದು ಸ್ಥಳಾಂತರಿಸಲಾಗಿ, ಮತ್ತೆ ಕಾರ್ಯಾಚರಣೆ ನಿಲ್ಲಿಸಲಾಗಿತ್ತು.