Advertisement

Kanakapura: ಮಹಿಳೆ ಮೇಲೆ ಕಾಡಾನೆ ದಾಳಿ, ತೀವ್ರವಾಗಿ ಗಾಯಗೊಂಡು ಅಸ್ವಸ್ಥಗೊಂಡಿರುವ ಮಹಿಳೆ

10:46 AM Jan 01, 2024 | Team Udayavani |

ಕನಕಪುರ: ತಾಲೂಕಿನ ಕಸಬಾ ಹೋಬಳಿ ಬರಡನಹಳ್ಳಿ ಗ್ರಾಮದಲ್ಲಿ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಜ.1ರ ಸೋಮವಾರ ಬೆಳಗ್ಗೆ ನಡೆದಿದೆ.

Advertisement

ಆನೆ ದಾಳಿಯಿಂದ ತೀವ್ರ ಅಸ್ವಸ್ಥಗೊಂಡಿರುವ ಮಹಿಳೆಯನ್ನು ಬರಡನಹಳ್ಳಿ ಉಪ್ಪಾಕೆರೆದೊಡ್ಡಿ ಗ್ರಾಮದ 30 ವರ್ಷದ ದುಂಡಮ್ಮ ಎಂದು ಗುರುತಿಸಲಾಗಿದೆ.

ಇವರು ರೇಷ್ಮೆ ಹುಳುಗಳಿಗೆ ಸೊಪ್ಪು ಹಾಕಲು ಹೋಗುತ್ತಿದ್ದಾಗ ಬೆಳಗಿನ ಜಾವ ಸುಮಾರು ನಾಲ್ಕು ಗಂಟೆಗೆ ಆನೆಯ ದಾಳಿ ನಡೆಸಿ, ಮಹಿಳೆ ಸತ್ತಿರಬಹುದು ಎಂದು ಬಿಟ್ಟು ಹೋಗಿದೆ.

ಆನೆ ದಾಳಿಯಿಂದ ಮಹಿಳೆಯ ಎಡ ತೋಳು ಸಂಪೂರ್ಣ ಜಜ್ಜಿ ಹೋಗಿದೆ. ಜಮೀನಿನ ಕಡೆ ಹೋದವರು ನೋಡಿಕೊಂಡು ಗ್ರಾಮಸ್ಥರಿಗೆ ಮತ್ತು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ದಾಳೇಶ್, ಘಟನೆಯ ಮಾಹಿತಿ ಪಡೆದುಕೊಂಡಿದ್ದು, ಆನೆ ದಾಳಿಯಿಂದ ತೀವ್ರ ಗಾಯಗೊಂಡಿರುವ ಸಂತ್ರಸ್ತ  ಮಹಿಳೆಗೆ ಚಿಕಿತ್ಸೆ ಕೊಡಿಸಿ, ಇಲಾಖೆಯಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next