Advertisement

ಕಾಡಾನೆಗಳ ದಾಳಿಗೆ ರೈತರು ಬೆಳೆದ ಬೆಳೆ ನಾಶ ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

12:19 PM Sep 12, 2020 | sudhir |

ಬಂಗಾರಪೇಟೆ: ತಾಲೂಕಿನ ಬೂದಿಕೋಟೆ ಹಾಗೂ ಕಾಮಸಮುದ್ರ ಹೋಬಳಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ರೈತರು ಬೆಳೆದಿರುವ ಅಪಾರ ಪ್ರಮಾಣದ ಟೊಮೆಟೋ, ರಾಗಿ, ನೀರಿನ ಪೈಪುಗಳು ಸೇರಿ ಹಲವಾರು ಬೆಳೆಗಳು ನಾಶವಾಗಿದ್ದು, ರೈತರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.

Advertisement

ತಾಲೂಕಿನ ಬೂದಿಕೋಟೆ ಹೋಬಳಿ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಕಳೆದ ಒಂದು ತಿಂಗಳಿಂದ ಬೀಡು ಬಿಟ್ಟಿರುವ ಆನೆಗಳ ಗುಂಪು ಗುಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ದೊಡ್ಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳ ಗುಂಪು ದಾಳಿ ಮಾಡಿದ್ದು, ರೈತರಾದ ಮುನಿಸ್ವಾಮಿರವರ ಎರಡು ಎಕರೆ ರಾಗಿ ಬೆಳೆ, ಮುನಿವೆಂಕಟಪ್ಪನವರ ಟಮೊಟೋ ಬೆಳೆ, ಪೈಪುಗಳು ಸೇರಿ ಹಲವಾರು ನಾಶವಾಗಿವೆ.

ಕಾಡಾನೆಗಳು ಬೆಳೆಗಳನ್ನು ನಾಶ ಮಾಡಿದ್ದನ್ನು ಕಂಡು ಅರಣ್ಯ ಇಲಾಖೆಯವರಿಗೆ ಫೋನ್‌ ಮಾಡಿ ವಿಷಯ ತಿಳಿಸಿದರೂ ಸ್ಥಳಕ್ಕೆ ಬಾರದ ಕಾರಣ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೆ ಕಾಡಾನೆ ದಾಳಿಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು, ಗಡಿ ಭಾಗದ ಗ್ರಾಮಗಳಲ್ಲಿ ಆತಂಕ ಹೆಚ್ಚಾದ ಕಾರಣ ಹೊಲ-ಗದ್ದೆಗಳಲ್ಲಿ ಕೆಲಸ ಮಾಡಲು ಹಾಗೂ ಹಸು, ಕುರಿಗಳನ್ನು ಮೇಯಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆಯವರು ಆದಷ್ಟು ಬೇಗ ಕಾರ್ಯಾಚರಣೆ ಮಾಡಿ ಆನೆಗಳ ಹಾವಳಿ ನಿಯಂತ್ರಿಸಬೇಕು. ಬೆಳೆ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next