Advertisement

Charmadi Ghat ರಸ್ತೆಯಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ: ಕೆಲ ಹೊತ್ತು ಟ್ರಾಫಿಕ್ ಜಾಮ್

06:07 PM May 17, 2023 | Team Udayavani |

ಮೂಡಿಗೆರೆ: ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ ಒಂಟಿ ಸಲಗವೊಂದು ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ, ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ.

Advertisement

ಸಂಜೆ 4.30 ಗಂಟೆ ಸಮಯದಲ್ಲಿ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಕಾಡಾನೆಯೊಂದು ರಸ್ತೆಗೆ ಪ್ರವೇಶಿಸಿದೆ ಈ ವೇಳೆ ಈ ಮಾರ್ಗದಲ್ಲಿ ಬರುತ್ತಿದ್ದ ಮಂಗಳೂರು ಹಾಸನ ಸರ್ಕಾರಿ ಬಸ್ ಚಾಲಕ ಆನೆಯನ್ನು ಗಮನಿಸಿ ಕೊಂಚ ದೂರದಲ್ಲಿ ಬಸ್ಸನ್ನು ನಿಲ್ಲಿಸಿದ್ದಾನೆ. ಕೆಲ ಸಮಯದ ಬಳಿಕ ರಸ್ತೆಯಲ್ಲಿದ್ದ ಆನೆ ರಸ್ತೆಯ ಮತ್ತೊಂದು ಭಾಗಕ್ಕೆ ಹೋಗಿ ನಿಂತಿದೆ.

ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಆನೆ ರಸ್ತೆಯ ಅಂಚಿಗೆ ಬಂದು ಮರದ ಬಳಿ ನಿಂತ ಬಳಿಕ ಬಸ್ಸು ಹಾಗೂ ಇತರ ವಾಹನಗಳು ನಿಧಾನವಾಗಿ ಸಾಗಿದವು, ರಸ್ತೆ ಬದಿಯಲ್ಲೇ ಆನೆ ನಿಂತಿದ್ದರಿಂದ ಕೆಲವು ದ್ವಿಚಕ್ರ ವಾಹನ ಸವಾರರು ಭಯಪಡುವಂತಾಯಿತು.

ಅರಣ್ಯ ಅಧಿಕಾರಿಗಳು ಚಾರ್ಮಾಡಿ ಘಾಟಿನಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿರ್ಬಂಧಿಸಿ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.

ಇದನ್ನೂ ಓದಿ: Chikkamagaluru; ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರು

Advertisement
Advertisement

Udayavani is now on Telegram. Click here to join our channel and stay updated with the latest news.

Next