Advertisement

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

12:30 PM Dec 16, 2024 | Team Udayavani |

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಗೋಳು ಕಡಿಮೆಯಾದಂತೆ ಕಾಣುತ್ತಿಲ್ಲ, ಭಾನುವಾರ (ಡಿ.15) ತಡರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಕೆ.ಆರ್.ಪೇಟೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆಯೊಂದು ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

Advertisement

ಕಳೆದ ಹಲವು ದಿನಗಳಿಂದ ಕಾಡಾನೆ ಹಾವಳಿ ಜೋರಾಗಿದ್ದು ಭಾನುವಾರ ತಡರಾತ್ರಿ ಸುಮಾರು 11:30ರ ಸುಮಾರಿಗೆ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾಡಾನೆ ಕಂಡು ನಾಯಿಯೊಂದು ಬೊಗಳುತ್ತಿದ್ದು ಇದನ್ನು ಕಂಡ ಗ್ರಾಮಸ್ಥರು ಮನೆಯಿಂದ ಹೊರ ಬಂದು ನೋಡಿದಾಗ ಕಾಡಾನೆ ಕಂಡು ಬಂದಿದೆ ಇದರಿಂದ ಗಾಬರಿಗೊಂಡ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಕಾಡಾನೆಯನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿದ್ದಾರೆ.

ಹಾಸನದಿಂದ ನಿರಂತರವಾಗಿ ಕಾಡಾನೆಗಳು ಚಿಕ್ಕಮಗಳೂರಿನತ್ತ ಆಗಮಿಸುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: Road Mishap: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next