ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು ಚನ್ನಪಟ್ಟಣ ತಾಲೂಕಿನ ಸುಳ್ಳೇರಿ ಗ್ರಾಮದ ಹೊರವಲಯದಲ್ಲಿ ಆರು ಕಾಡಾನೆಗಳು ಪ್ರತ್ಯಕ್ಷಗೊಂಡಿದ್ದು ಜನರಲ್ಲಿ ಆತಂಕ ಮನೆಮಾಡಿದೆ.
ನರೀಕಲ್ಲು ಗುಡ್ಡೆ ಅರಣ್ಯ ಪ್ರದೇಶದಿಂದ ಬಂದಿರುವ ಆನೆಗಳು ಈ ಮಾರ್ಗಮಧ್ಯದಲ್ಲಿ ಸಿಕ್ಕ ಸಿಕ್ಕ ರೈತರ ಬೆಳೆಗಳನ್ನು ಹಾನಿ ಮಾಡಿದ್ದು ಬೆಳೆಗಳನ್ನು ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ.
ಇತ್ತ ಕಾಡಾನೆಗಳು ಗ್ರಾಮಕ್ಕೆ ಪ್ರವೇಶಿಸುತ್ತಿದ್ದಂತೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳನ್ನು ಕಡಿಗಟ್ಟಲು ಹರಸಾಹಸ ಪಡುತ್ತಿದ್ದಾರೆ.
ಮಂಗಳವಾರ ರಾತ್ರಿಯಷ್ಟೇ ವಾಪಸ್ಸು ಹೋಗಿದ್ದ ಆನೆಗಳು ಮತ್ತೆ ಹಿಂದಕ್ಕೆ ಬಂದಿವೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಸ್ಥಳದಲ್ಲಿ ಅರಣ್ಯ ಇಲಾಖೆ ಹಾಗೂ ಆನೆ ಕಾರ್ಯಪಡೆ ತಂಡದ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಆನೆಗಳನ್ನು ಕಾಡಿಗಟ್ಟುವ ಪ್ರಯತ್ನ ನಡೆಯುತ್ತಿದೆ.
ಇದನ್ನೂ ಓದಿ: ಬಸ್ -ಬೈಕ್ ಮುಖಾಮುಖಿ: ಪರೀಕ್ಷೆ ಬರೆಯಲು ಬರುತ್ತಿದ್ದ ವಿದ್ಯಾರ್ಥಿ ಮೃತ್ಯು, ಇನ್ನೋರ್ವ ಗಂಭೀರ