Advertisement

Gudlupete: ವಿದ್ಯುತ್ ತಗುಲಿ ಕಾಡಾನೆ ಸಾವು

10:20 AM Jul 17, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಜಮೀನಿನಲ್ಲಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಕುರುಬರ ಹುಂಡಿ ಗ್ರಾಮದಲ್ಲಿ ನಡೆದಿದೆ.

Advertisement

ಕುರುಬರಹುಂಡಿ ಗ್ರಾಮದ ಶಿವರಾಜಪ್ಪ ಎಂಬವರು ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಆಹಾರ ಅರಸಿ ಕಾಡಿನಿಂದ ಬಂದ ಆನೆ ಸಿಲುಕಿ ಭಾನುವಾರ ತಡ ರಾತ್ರಿ ಮೃತಪಟ್ಟಿದೆ ಎನ್ನಲಾಗುತ್ತಿದೆ.

ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next