Advertisement
ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಮತ್ತು ನಾಸಿಯಾ (30) ಗಾಯಾಳುಗಳು. ರೆಹಮಾನ್ ಅವರ ತಲೆ ಮತ್ತು ಕಾಲಿಗೆ ಹಾಗೂ ನಾಸಿಯಾ ಅವರ ಕಾಲಿಗೆ ಗಾಯವಾಗಿದೆ. ಇವರಿಗೆ ಕಕ್ಕಿಂಜೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
Related Articles
Advertisement
ಈ ಘಟನೆಗೆ ಪೂರ್ವದಲ್ಲಿ ಆನೆಯು ಪರಿಸರದ ಜನನಿಬಿಡ ಪ್ರದೇಶಗಳಲ್ಲಿ ಓಡಾಟ ನಡೆಸಿದ್ದು ಒಬ್ಬರ ಮನೆಯಂಗಳಕ್ಕೂ ಹೋಗಿತ್ತು ಹಾಗೂ ರಸ್ತೆ ಬದಿ ಇರುವ ಮನೆಯೊಂದರ ಗೇಟನ್ನು ಮುರಿಯಲು ಯತ್ನಿಸಿತ್ತು. ಆಗ ಸುತ್ತಮುತ್ತಲ ಮನೆಯವರು ಬೊಬ್ಬೆ ಹೊಡೆದ ಕಾರಣ ಮತ್ತೆ ರಸ್ತೆಗೆ ಬಂದಿತ್ತು.
ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳಿಂದ ನಿರಂತರ ಕೃಷಿ ಹಾನಿ ಉಂಟಾಗುತ್ತಿದ್ದು, ಇದೇ ಮೊದಲ ಬಾರಿಗೆ ವಾಹನದ ಮೇಲೆ ದಾಳಿ ನಡೆದಿದೆ.
ಬೆಳಗ್ಗೆ ಶಾಂತ, ರಾತ್ರಿ ರೌದ್ರ!ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ತೋಟತ್ತಾಡಿ ಪರಿಸರದಲ್ಲಿ ಸೋಮವಾರ ಬೆಳಗ್ಗೆ ಇದೇ ಕಾಡಾನೆ ಕಂಡುಬಂದಿತ್ತು. ಆಗ ಆನೆ ಶಾಂತವಾಗಿತ್ತು. ಆ ಪರಿಸರದಲ್ಲಿ ಓಡಾಡಿ ಯಾವುದೇ ಹಾನಿ ಎಸಗದೆ ಕಾಡಿಗೆ ತೆರಳಿತ್ತು.
ರಾತ್ರಿಯ ವೇಳೆ ನೆರಿಯದ ಬಯಲು ಶಾಲೆಯ ಬಳಿ ಕಾಣಿಸಿಕೊಂಡ ರಸ್ತೆಗೆ ಇಳಿಯುವ ವೇಳೆ ಜೀಪ್ ಒಂದು ಸಾಗಿದ್ದು, ಅದರ ಬೆಳಕು ಕಂಡ ಬಳಿಕ ರೌದ್ರವಾತಾರ ತಾಳಿತು. ಈ ನಡುವೆ ಜನರು ಕೂಡ ಗೊಬ್ಬೆ ಹಾಕಿ, ಪಟಾಗಿ ಸಿಡಿಸಿದ್ದು ಆನೆಯ ಸಿಟ್ಟಿಗೆ ಕಾರಣವಾಯಿತು. ಆನೆ ಬರುವ ವೇಳೆ ಯಾವುದೇ ವಾಹನ ಎದುರಾಗದಿದ್ದರೆ ಅದು ತನ್ನಷ್ಟಕ್ಕೆ ಹೋಗುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.