ಚಾರ್ಮಾಡಿ: ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆಗಳು ಪ್ರತ್ಯಕ್ಷಗೊಳ್ಳುತ್ತಿವೆ ಇದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.
ಇದೀಗ ವಾಹನ ಸವಾರರು ಕತ್ತಲಾಗುವ ವೇಳೆ ಈ ಮಾರ್ಗದಲ್ಲಿ ಸಂಚರಿಸಲು ಭಯಪಡುವ ವಾತಾವರಣ ನಿರ್ಮಾಣಗೊಂಡಿದ್ದು ಆನೆಗಳನ್ನು ಸ್ಥಳಾಂತರಿಸುವಂತೆ ವಾಹನ ಸವಾರರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಕಾಡಾನೆ ಪ್ರತ್ಯಕ್ಷಗೊಂಡಿದ್ದು ಜೀವ ಭಯದಲ್ಲಿ ವಾಹನ ಸವಾರರು ಸಾಗುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಕೆಲವೊಮ್ಮೆ ಗಂಟೆಗಳ ಕಾಲ ಹೆದ್ದಾರಿಯಲ್ಲಿ ಕಾದು ಕುಳಿಯುವ ಪರಿಸ್ಥಿತಿ ನಿರ್ಮಾಣಗೊಂಡಿದ್ದೂ ಇದೆ.
ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಣಸಿಗವ ಆನೆಗಳಿಂದ ವಾಹನ ಸವಾರರೂ ಭಯದಲ್ಲೇ ವಾಹನ ಚಾಲನೆ ಮಾಡಿಕೊಂಡು ಬರಬೇಕಾಗಿದೆ ಅಲ್ಲದೆ ದೊಡ್ಡ ದೊಡ್ಡ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಚಿಕ್ಕಮಗಳೂರು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಇದೀಗ ಕಾಡಾನೆ ಪ್ರತ್ಯಕ್ಷದಿಂದ ವಾಹನ ಸವಾರರು ಕಾಡಾನೆಯನ್ನು ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: Mumbai: ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ