Advertisement

Wildlife Division; ಜೀವ ಪಣಕ್ಕಿಡುವವರಿಗೆ ಕಾಠಿಣ್ಯ ಭತ್ಯೆ: ಸಚಿವ ಈಶ್ವರ್‌ ಖಂಡ್ರೆ

10:49 PM Jul 27, 2024 | Team Udayavani |

ಬೆಂಗಳೂರು: ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬಂದಿಗೆ ಕಾಠಿಣ್ಯ ಭತ್ತೆ (ಹಾರ್ಡ್‌ ಶಿಪ್‌ ಅಲೋಯನ್ಸ್‌ – ನಿಗದಿಗಿಂತ ಹೆಚ್ಚು ಶ್ರಮ ಹಾಕುವುದು)ಯನ್ನು ರಾಜ್ಯ ಸರಕಾರ ಮಂಜೂರು ಮಾಡಿದೆ.

Advertisement

ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳಿಗೆ ತಲಾ 3,500, ಅರಣ್ಯ ರಕ್ಷಕರಿಗೆ 2,700 ಹಾಗೂ ಡಿ ದರ್ಜೆ ನೌಕರರಿಗೆ 2,000 ರೂ.ಗಳನ್ನು ಮಾಸಿಕ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಬಿ. ಖಂಡ್ರೆ ತಿಳಿಸಿದ್ದಾರೆ.

ರಾಜ್ಯದ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇದರ ನಿಗ್ರಹಕ್ಕಾಗಿ ಆನೆ ಕಾರ್ಯಪಡೆ ರಚಿಸಲಾಗಿದೆ. ಇದರಲ್ಲಿ ಕಾರ್ಯ ನಿರ್ವಹಿಸುವ ಹೊರಗುತ್ತಿಗೆ ಸಿಬಂದಿಯೂ ಸೇರಿದಂತೆ ಅಧಿಕಾರಿ ಮತ್ತು ಸಿಬಂದಿಗೆ ಮಾಸಿಕ ಕರ್ತವ್ಯ ನಿರ್ವಹಿಸಿದ 6 ದಿನಗಳಿಗೆ 500 ರೂ. ಆಧಾರದಲ್ಲಿ ತಿಂಗಳಿಗೆ ಗರಿಷ್ಠ 2000 ರೂ. (ಷರತ್ತಿಗೆ ಒಳಪಟ್ಟು) ನೀಡಲು ಆದೇಶ ಹೊರಡಿಸಲಾಗಿದೆ ಎಂದು ಪ್ರಕಟನೆೆಯಲ್ಲಿ ಹೇಳಿದ್ದಾರೆ.

ನಂಜನಗೂಡು, ಎಚ್‌.ಡಿ. ಕೋಟೆ, ಸರಗೂರು, ಟಿ. ನರಸೀಪುರ, ಮಂಡ್ಯ, ಪಾಂಡವಪುರ, ನಾಗಮಂಗಲ ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಿರತೆ ಕಾರ್ಯಪಡೆ, ವನ್ಯ ಜೀವಿಗಳನ್ನು ಹಿಮ್ಮೆಟ್ಟಿಸುವ ಕ್ಷಿಪ್ರ ಸ್ಪಂದನಾ ಪಡೆ ಸಿಬಂದಿ ಮತ್ತು ಅರಣ್ಯದೊಳಗಿರುವ ಕಳ್ಳಬೇಟೆ ಶಿಬಿರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬಂದಿ ಹಾಗೂ ಹೊರಗುತ್ತಿಗೆ ನೌಕರರಿಗೂ ಇದು ಅನ್ವಯಿಸುತ್ತದೆ ಎಂದಿದ್ದಾರೆ.

ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಿದ್ದ ಸಂದರ್ಭ ಅಲ್ಲಿನ ಸಿಬಂದಿ ಮತ್ತು ಹೊರಗುತ್ತಿಗೆ ನೌಕರರು ಚಳಿ, ಮಳೆ, ಗಾಳಿ ಎನ್ನದೆ, ವನ್ಯಜೀವಿಗಳ ದಾಳಿಯ ಅಪಾಯದ ನಡುವೆಯೂ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವುದನ್ನು ಗಮನಿಸಿ, ಈ ವಿಶೇಷ ಭತ್ತೆ ನೀಡಲು ತೀರ್ಮಾನಿಸಿರುವುದಾಗಿ ಹೇಳಿ¨ªಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next