Advertisement

ವಿದ್ಯುತ್‌ ಅವಘಡಗಳಿಂದ ವನ್ಯಪ್ರಾಣಿಗಳ ಸಾವು: ಸರಕಾರಕ್ಕೆ ನೋಟಿಸ್‌

09:15 PM Oct 31, 2022 | Team Udayavani |

ಬೆಂಗಳೂರು: ರಾಜ್ಯದ ವಿವಿಧೆಡೆ ಆನೆಗಳು ಮತ್ತು ವನ್ಯಜೀವಿಗಳು ವಿದ್ಯುತ್‌ ತಂತಿ ತಗಲಿ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದನ್ನು ತಡೆಯಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ನ್ಯಾಯವಾದಿ ಅಂಕುಶ್‌ ಎಣ್ಣೆಮಜಾಲ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಸ್ವಲ್ಪ ಹೊತ್ತು ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಹಿತ ಏಳು ಜನ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿತು.

Advertisement

Udayavani is now on Telegram. Click here to join our channel and stay updated with the latest news.

Next