Advertisement

ಸಿದ್ದರಾಮಯ್ಯ ಜೊತೆ ದಿಲ್ಲಿಗೆ ಹೋಗಿ ಡಿಕೆಶಿ ವಿರುದ್ಧ ದೂರು ನೀಡುತ್ತೇನೆ: ಅಖಂಡ ಶ್ರೀನಿವಾಸ

04:08 PM Mar 01, 2021 | Team Udayavani |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯರನ್ನು ಕರೆದುಕೊಂಡು ದಿಲ್ಲಿಗೆ ಹೋಗುತ್ತೇನೆ. ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಡಿ ಕೆ ಶಿವಕುಮಾರ್ ವಿರುದ್ಧ ನಾನು ದೂರು ನೀಡುತ್ತೇನೆ ಎಂದು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದರು.

Advertisement

ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮೇಲೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಸನ್ನ ಕುಮಾರ್ ರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಡಿ ಎಂದು ಹೇಳಿದ್ದೆ ಆದರೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಒಬ್ಬ ಹಾಲಿ ಶಾಸಕ ಇರಬೇಕಾದರೆ ಮತ್ತೊಬ್ಬ ನಾಯಕನನ್ನು ಕರೆದುಕೊಂಡು ಬಂದಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಗುಂಪುಗಾರಿಕೆ ಆಗುವುದು ಸಹಜ ಎಂದರು.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಸಿಎಂ ಬಿಎಸ್ ವೈ ಟೆಂಪಲ್ ರನ್: ಬೆಂಗಳೂರು ಪ್ರಯಾಣ ರದ್ದು

ಡಿ ಕೆ ಶಿವಕುಮಾರ್ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಪಕ್ಷದಲ್ಲಿ ಅವರು ನನಗೆ ಬೆಂಬಲ ಕೊಟ್ಟಿಲ್ಲ.ನನ್ನ ಮನಗೆ ಬೆಂಕಿ ಬಿದ್ದಿದೆ, ನನಗೆ ನೋವಾಗಿದೆ. ನನಗೆ ಇದುವರೆಗೂ ನ್ಯಾಯ ಸಿಕ್ಕಿಲ್ಲ ಎಂದ ಅಖಂಡ ಶ್ರೀನಿವಾಸ ಮೂರ್ತಿ, ಪ್ರಸನ್ನ ಕುಮಾರ್ ಅವರು ನನ್ನ ಬಗ್ಗೆ ಅವನು, ಇವನು ಎಂದು ಮಾತಾನಾಡಿದ್ದು ತಪ್ಪು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next