ಬೆಂಗಳೂರು: ಇನ್ನು ಮೂರು ತಿಂಗಳ ಅವಧಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸುತ್ತೇವೆ ಎಂದು ಸಚಿವ ಸೋಮಣ್ಣ ಹೇಳಿದರು.
ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದಗಂಗಾ ಶ್ರೀ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ:ಕರ್ಫ್ಯೂ ಮಾಡಿ ಜನರ ಜೀವನಕ್ಕೆ ತೊಂದರೆ ಮಾಡುವುದು ಸರಿಯಲ್ಲ: ಶೋಭಾ ಕರಂದ್ಲಾಜೆ
ಮುಖ್ಯಮಂತ್ರಿಗಳ ಜೊತೆಯಲ್ಲಿ ಮಾತುಕತೆಯಾಗಿದೆ. ಇನ್ನು ಮೂರು ತಿಂಗಳ ಒಳಗೆ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಬದ್ದವಾಗಿದೆ ಎಂದು ವಿ.ಸೋಮಣ್ಣ ಹೇಳಿದರು.
ಬಿಜೆಪಿ ಸಿದ್ದತೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನ ಬಿಜೆಪಿ ಪದಾಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಬೆಂಗಳೂರಿನ ಮೂರು ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಉಸ್ತುವಾರಿಗಳು, ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ 15 ಪದಾಧಿಕಾರಿಗಳು ಭಾಗಿಯಾಗಿದ್ದರು.