Advertisement

WFI ಜಂತರ್ ಮಂತರ್‌ನಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಿದ ಅಗ್ರ ಕುಸ್ತಿಪಟುಗಳು

08:16 PM Apr 23, 2023 | Team Udayavani |

ಹೊಸದಿಲ್ಲಿ : ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಅಂತಾರಾಷ್ಟ್ರೀಯ ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂತರ್‌ ನಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI ) ಮತ್ತು ಅದರ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತಮ್ಮ ಪ್ರತಿಭಟನೆಯನ್ನು ಭಾನುವಾರ ಸಂಜೆಯಿಂದ ಪುನರಾರಂಭಿಸಿದ್ದಾರೆ.

Advertisement

WFI ಮತ್ತು ಅಧ್ಯಕ್ಷರ ವಿರುದ್ಧ ತಮ್ಮ ಹೋರಾಟ ಆರಂಭಿಸುವ ಮೂಲಕ ಕೋಲಾಹಲವನ್ನು ಸೃಷ್ಟಿಸಿದ 3 ತಿಂಗಳ ನಂತರ ಕುಸ್ತಿಪಟುಗಳು ಮತ್ತೆ ಪ್ರತಿಭಟನಾ ಸ್ಥಳಕ್ಕೆ ಮರಳಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್, ಅಪ್ರಾಪ್ತ ವಯಸ್ಕಳು ಸೇರಿದಂತೆ ಹಲವಾರು ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳದ ಕುರಿತು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸರು ವಿಫಲವಾದ ನಂತರ ಜಂತರ್ ಮಂತರ್‌ಗೆ ಮರಳಬೇಕಾಯಿತು. ಶುಕ್ರವಾರ ನವದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂದು ಕುಸ್ತಿಪಟುಗಳು ಹೇಳಿಕೊಂಡಿದ್ದಾರೆ.

“ನಾವು ಸಿಪಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇವೆ. ಎರಡು ದಿನಗಳು ಕಳೆದಿವೆ, ಆದರೆ ಇನ್ನೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಏಳು ಮಹಿಳೆಯರು ದೂರು ನೀಡಿದ್ದಾರೆ, ಅದರಲ್ಲಿ ಅಪ್ರಾಪ್ತ ವಯಸ್ಕಳೂ ಸಹ ಸೇರಿದ್ದಾರೆ. ಇದು ಪೋಸ್ಕೋ ಪ್ರಕರಣಕ್ಕೆ ಕಾರಣವಾಗುತ್ತದೆ, ಆದರೆ ಇನ್ನೂ ಏನೂ ಮಾಡಲಾಗಿಲ್ಲ,” ಎಂದು ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಹೇಳಿದರು.

ಜನವರಿಯಲ್ಲಿ ಕುಸ್ತಿಪಟುಗಳು ಬೀದಿಗಿಳಿದಾಗ, ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next