Advertisement

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

08:12 PM Mar 29, 2024 | Team Udayavani |

ಬೆಂಗಳೂರು: ಬೆಂಬಲಿಗರೊಂದಿಗೆ ಚರ್ಚಿಸಿದ ನಂತರ ಎರಡು ದಿನಗಳಲ್ಲಿ ನನ್ನ ಮುಂದಿನ ನಡೆ ತಿಳಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಶುಕ್ರವಾರ ಹೇಳಿದ್ದಾರೆ.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಒಂದು ಗಂಟೆ ಸುದೀರ್ಘ ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ”ವಿಜಯೇಂದ್ರ ಅವರು ತಮ್ಮ ಅಭಿಪ್ರಾಯ ಮತ್ತು ನಿರೀಕ್ಷೆಗಳನ್ನು ವ್ಯಕ್ತಪಡಿಸಿದರು. ನನಗೂ ಜಿಲ್ಲೆ ಮತ್ತು ಚುನಾವಣೆಯ ಬಗ್ಗೆ ಇರುವ ಕಾಳಜಿಯನ್ನು ಹೇಳಿದ್ದೇನೆ. ನಾನು ಬಿಜೆಪಿಯಲ್ಲೇ ಇರಬೇಕೆಂದು ಬಯಸಿದ್ದರಿಂದ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡರು” ಎಂದರು.

‘ಈ ಚುನಾವಣೆಯಲ್ಲಿ ಬಿಜೆಪಿಯು ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ನೀಡುವ ಬದಲು ತನ್ನಲ್ಲಿಯೇ ಉಳಿಸಿಬೇಕಿತ್ತು. ಅದು ಪಕ್ಷಕ್ಕೂ ಮುಂದಿನ ದಿನಗಳಲ್ಲಿ ಲಾಭವಾಗುತ್ತಿತ್ತು’ ಎಂದು ಹೇಳಿದರು.

“ನಾಳೆ ನಾನು ನನ್ನ ಬೆಂಬಲಿಗರೊಂದಿಗೆ ಸಭೆ ನಡೆಸುತ್ತೇನೆ. ಬೆಂಬಲಿಗರ ಅಭಿಪ್ರಾಯ ಕೇಳದೆ ಏಕಪಕ್ಷೀಯವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಅವರ ನಿರೀಕ್ಷೆ ಮತ್ತು ಅಭಿಪ್ರಾಯಗಳನ್ನು ಆಲಿಸುವುದು ನನ್ನ ಕರ್ತವ್ಯ. ಮಂಡ್ಯದಲ್ಲಿಯೇ ನನ್ನ ನಿಲುವು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದೇನೆ ಎಂದು ಸುಮಲತಾ ತಿಳಿಸಿದರು.

ಎಚ್‌.ಡಿ.ಕುಮಾರಸ್ವಾಮಿ ಅವರು ನಿಮ್ಮನ್ನು ಭೇಟಿ ಮಾಡಲು ಇಚ್ಛಿಸಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಮಲತಾ’ ಅವರು ನನ್ನನ್ನು ಭೇಟಿ ಮಾಡಲು ಅಭ್ಯಂತರವಿಲ್ಲ ಎಂದರು.

Advertisement

”ನಾನು ಮತ್ತು ಅಂಬರೀಶ್‌ ಹಲವು ವರ್ಷಗಳ ಸ್ನೇಹಿತರು. ಸಂಸದೆ ಸುಮಲತಾ ಅವರು ಕೂಡ ನನಗೆ ಊಟ ಬಡಿಸಿದ್ದಾರೆ. ನಾವು ಶಾಶ್ವತ ಶತ್ರುಗಳಲ್ಲ. ಅವರು ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಅವರು ಸೂಕ್ತ ನಿರ್ಧಾರವೊಂದನ್ನು ಘೋಷಿಸಲಿದ್ದಾರೆ ಎಂದು ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿರುವ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next