Advertisement

2024ರಲ್ಲಿ ಟಿಎಂಸಿ ಬಿಜೆಪಿಯನ್ನು ಸೋಲಿಸಲಿದೆ : ಮಮತಾ ಬ್ಯಾನರ್ಜಿ ವಿಶ್ವಾಸ

07:16 PM Dec 15, 2021 | Team Udayavani |

ಕೋಲ್ಕತಾ : 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಸೋಲಿಸಲಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ  ವಿಶ್ವಾಸ ವ್ಯಕ್ತಪಡಿಸಿದ್ದಾರೆ

Advertisement

ಫೂಲ್ಬಗನ್ ಪ್ರದೇಶದಲ್ಲಿ ಡಿಸೆಂಬರ್ 19 ರಂದು ನಡೆಯಲಿರುವ ಕೋಲ್ಕತಾ ಮುನ್ಸಿಪಲ್ ಚುನಾವಣಾ ಪ್ರಚಾರಕ್ಕಾಗಿ ಆಯೋಜಿಸಿದ್ದ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಕೇಸರಿ ಪಕ್ಷವು ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿದಂತಹ ಸೋಲನ್ನು ದೇಶದೆಲ್ಲೆಡೆ ಎದುರಿಸಲಿದೆ ಎಂದು ಮಮತಾ ಹೇಳಿದ್ದಾರೆ.

ರಾಜ್ಯದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ ಉದ್ಯಮವನ್ನು ತರುವುದು ಮತ್ತು ಉದ್ಯೋಗಗಳನ್ನು ಸೃಷ್ಟಿಸುವುದು ತನ್ನ ಏಕೈಕ ಗುರಿಯಾಗಿದೆ ಎಂದು ಹೇಳಿದರು.

ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸಿದ ಪ್ರಚಾರವನ್ನು ನಾವು ನೋಡಿದ್ದೇವೆ. ಅದಕ್ಕೆ ಎಲ್ಲರೂ ಹೆದರಿದ್ದರು. ಆದರೆ ರಾಜ್ಯದ ಜನರು ಅವರನ್ನು ಸೋಲಿಸಿದರು. ಬಂಗಾಳ ಇಂದು ಏನು ಯೋಚಿಸುತ್ತದೆಯೋ, ಭಾರತ ನಾಳೆ ಯೋಚಿಸುತ್ತದೆ. ನಾವು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next