Advertisement

ಚಿಕ್ಕೋಡಿ ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ: ಬಿ.ಸಿ.ಪಾಟೀಲ್

01:57 PM Jun 07, 2021 | keerthan |

ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವದು  ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು.

Advertisement

ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸೋಮವಾರ ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದಕ್ಕೂ ಮುನ್ನ ಈ ವಿಷಯ ಪ್ರಸ್ತಾಪಿಸಿದ ಶಾಸಕ ಪಿ.ರಾಜೀವ್ ಅವರು ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಮೂಲಕ ಐತಿಹಾಸಿಕ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ: ಸಚಿವ ಬಿ.ಸಿ. ಪಾಟೀಲ್

ಇದಕ್ಕೆ ಸ್ಪಂದಿಸಿದ ಕೃಷಿ ಸಚಿವರು, ಈ ರೀತಿ ಕೃಷಿ ಜಿಲ್ಲೆ‌ ಘೋಷಿಸುವ ಬಗ್ಗೆ ಗೊತ್ತಿಲ್ಲ. ಅಧಿಕಾರಿಗಳ ಜೊತೆ ಚರ್ಚಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

Advertisement

ಜಿಲ್ಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರದ ಕೊರತೆಯಿಲ್ಲ. ಸಮರ್ಪಕ ದಾಸ್ತಾನು ಲಭ್ಯವಿದ್ದು, ಯಾವುದೇ ಕಾರಣಕ್ಕೂ ಕಾಳಸಂತೆಯಲ್ಲಿ ಸಬ್ಸಿಡಿ ಗೊಬ್ಬರ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ‌ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಫೆಡರೇಶನ್ ಮೂಲಕ ಸಮರ್ಪಕವಾಗಿ ಗೊಬ್ಬರ ವಿತರಿಸಬೇಕು. ಸಾಕಷ್ಟು ದಾಸ್ತಾನು ಇರುವುದರಿಂದ ಸಮರ್ಪಕ ವಿತರಣೆ ಮಾಡದಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೊಸ ತಾಲ್ಲೂಕು ಪುನರ್ವಿಂಗಡಣೆ ಬಳಿಕವೇ ಅಗತ್ಯ ರೈತ ಸಂಪರ್ಕ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಹಣಕಾಸು ಇಲಾಖೆಯ ಒಪ್ಪಿಗೆ ದೊರೆತ ಬಳಿಕ ನೂತನ ತಾಲ್ಲೂಕುಗಳಿಗೆ ಕೃಷಿ ಸಹಾಯಕ ನಿರ್ದೇಶಕರ ಹುದ್ದೆ ಮಂಜೂರು ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:ಭಿಕ್ಷೆ ಬೇಡಿ ಮಂತ್ರಿಯಾದವರು ಯಡಿಯೂರಪ್ಪ ಬಗ್ಗೆ ಮಾತನಾಡುತ್ತಾರೆ: ರೇಣುಕಾಚಾರ್ಯ ಕಿಡಿ

Advertisement

Udayavani is now on Telegram. Click here to join our channel and stay updated with the latest news.

Next