ಬೆಂಗಳೂರು: ಬೆಂಗಳೂರಿನಲ್ಲಿ ಶನಿವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದೇ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆ ಬೇರೆ ವಿಚಾರದ ಬಗ್ಗೆ ಚರ್ಚೆಯಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ:ಜನತಾ ಜಲಧಾರೆ ಯಶಸ್ಸಿಗಾಗಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ
ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ಬಿಬಿಎಂಪಿ ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಬಗ್ಗೆ ಕಾನೂನಾತ್ಮಕವಾಗಿ ಹಾಗೂ ಸಂವಿಧಾನಾತ್ಮಕವಾಗಿ ಒಬಿಸಿ ಮೀಸಲಾತಿ ಮಾಡಲೇಬೇಕಿದೆ. ಅದಕ್ಕೆ ಈಗಾಗಲೇ ರಚಿಸಲಾಗಿರುವ ಸಮಿತಿ ತನ್ನ ವರದಿ ಸಲ್ಲಿಸಲು ಸಮಯಾವಕಾಶ ನೀಡುವಂತೆ ಅಥವಾ ಹಳೆಯ ಮೀಸಲಾತಿ ಪ್ರಕಾರ ಚುನಾವಣೆ ಮಾಡಲು ಅವಕಾಶ ನೀಡುವಂತೆ ಕೋರಲಾಗಿದೆ. ಇದಕ್ಕೆ ಬಹುತೇಕ ಅವಕಾಶ ಸಿಗುವ ಭರವಸೆ ಇದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.