Advertisement

ಕರ್ಫ್ಯೂ ಮುಂದುವರಿಕೆ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

10:24 AM May 04, 2021 | Team Udayavani |

ಬೆಂಗಳೂರು: ಕೋವಿಡ್-19 ಸೋಂಕು ಹೆಚ್ಚುತ್ತಿರುವ ಕಾರಣ ಈಗ ಜಾರಿಯಲ್ಲಿರುವ ಜನತಾ ಕರ್ಫ್ಯೂ ಮುಂದುವರಿಸುವ ಬಗ್ಗೆ ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತಾ ಕರ್ಪ್ಯೂ ಮುಂದುವರಿಸುವುದು ಉತ್ತಮ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇಂದು  ಸಂಜೆ ಸಚಿವ ಸಂಪುಟ ಸಭೆಯಿದೆ. ಸಭೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಜನತಾ ಕರ್ಪ್ಯೂ ಜಾರಿ ಮಾಡಿ ಬೆಳಿಗ್ಗೆ ಅಗತ್ಯ ವಸ್ತುಗಳಿಗೆ ಅವಕಾಶ ಕೊಟ್ಟರೆ ಮಾರುಕಟ್ಟೆಗಳಿಗೆ ಸಿಕ್ಕಪಟ್ಟೆ ಜನರು ಬರುತ್ತಿದ್ದಾರೆ. ಹೀಗಾಗಿ ನಿಯಂತ್ರಣ ಮಾಡುವುದು ಅಗತ್ಯವಿದೆ. ಇಂದು ಸಿಎಂ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಸುಧೀರ್ಘವಾಗಿ ಚರ್ಚೆ ಮಾಡಿ ಬಳಿಕ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಎಸ್ ಟಿ ಸೋಮಶೇಖರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next