ಹೊಸದಿಲ್ಲಿ: ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಾಗುವುದು. ಎಲ್ಲಾ ಶಾಸಕರನ್ನು ಸಚಿವರನ್ನಾಗಿಸಲು ಸಾಧ್ಯವಿಲ್ಲ. ಒಂದು ಸಮತೋಲಿತ ಸಂಪುಟವನ್ನು ರಚನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ಪಕ್ಷದ ಸಭೆಯಿದೆ. ಅದರ ಬಳಿಕ ಸಚಿವ ಸಂಪುಟದ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಅದರ ನಂತರ ಸಚಿವ ಸಂಪುಟದ ಬಗ್ಗೆ ಮಾಹಿತಿ ನೀಡುತ್ತೇನೆ ಎಂದರು.
ಇದನ್ನೂ ಓದಿ:ಇಂದೂ ಮುಂದುವರಿಯಲಿದೆ ಸಂಪುಟ ಸರ್ಕಸ್: 15 ಶಾಸಕರಿಗೆ ಮಾತ್ರ ಅವಕಾಶ? ಹಿರಿಯರಿಗೆ ಕೊಕ್?
ದೆಹಲಿಗೆ ಬಂದ ಶಾಸಕರ ಜೊತೆಯೂ ಮಾತನಾಡುತ್ತೇನೆ. ಸಂಪುಟ ರಚನೆಯ ವೇಳೆ ಪ್ರಾದೇಶಿಕ ಸಮತೋಲನ ಕಾಪಾಡಬೇಕಿದೆ. ಎಷ್ಟು ಹಂತದಲ್ಲಿ ಸಂಪುಟ ರಚನೆ ಮಾಡಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇಂದು ಸಂಜೆ ಅಥವಾ ನಾಳೆ ಇದರ ಬಗ್ಗೆ ಸಂಪೂರ್ಣ ಚಿತ್ರಣ ಸಿಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಉಪ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಸಂಪುಟದ ಗಾತ್ರ ಆಧರಿಸಿ ಇದರ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದರು.