Advertisement
ವಿಧಾನಸೌಧದಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
Related Articles
Advertisement
ಪರ್ಸೆಂಟೇಜ್ ಬಗ್ಗೆ ರಾಜ್ಯದ ಉದ್ದಗಲಕ್ಕೂ ಬೀದಿಯಲ್ಲಿ ಚರ್ಚೆ ನಡೆಯುತ್ತಿದೆ. ಅಧಿಕೃತ ವಿರೋಧ ಪಕ್ಷ, ಆಳುವ ಪಕ್ಷಗಳ ನಡುವೆ ರಾಜ್ಯದಲ್ಲಿ ನಡೆಯುತ್ತಿರುವ ಲೂಟಿ ಬಗ್ಗೆ ಬರೀ ಮಾತಿನಲ್ಲಿ ಪೈಪೋಟಿ ನಡೆಯುತ್ತಿದೆ. ನಿಖರವಾಗಿ ದಾಖಲೆಗಳು ಇದ್ದರೆ ಚರ್ಚೆ ಮಾಡಿ ಎಂದು ನಾನು ನಮ್ಮ ಶಾಸಕರಿಗೆ ತಿಳಿಸಿದ್ದೇನೆ. ನಾನು ಕೂಡ ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ಸುಖಾಸುಮ್ಮನೆ ಸದನದಲ್ಲಿ ಸಂತೆ ಭಾಷಣ ಮಾಡಿದರೆ ಪ್ರಯೋಜನವಿಲ್ಲ. ಸದನದ ಅಮೂಲ್ಯ ಸಮಯ ಸದುಪಯೋಗ ಮಾಡಿಕೊಳ್ಳುವಂತೆ ಶಾಸಕರಿಗೆ ಸಲಹೆ ನೀಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ:ರಾಜಕಾಲುವೆ ಒತ್ತುವರಿ ಮಾಡಿದವರು ಕ್ರಮ ಅನುಭವಿಸುತ್ತಾರೆ: ಸಿಎಂ ಬೊಮ್ಮಾಯಿ ಎಚ್ಚರಿಕೆ
ಒಂದಿಷ್ಟು ದಾಖಲೆಗಳನ್ನು ನಾನು ಸ್ಯಾಂಪಲ್ ಆಗಿ ಬಹಿರಂಗ ಮಾಡುತ್ತೇನೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡುತ್ತಿದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ ಜನತೆಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಗೊತ್ತಾಗಲಿ. ಅದಕ್ಕೆ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರೀ ಹಗರಣ. ಸರ್ಕಾರಕ್ಕೆ ಬರಬೇಕಾದ ಎಂಟತ್ತು ಸಾವಿರ ಕೋಟಿ ರೂಪಾಯಿ ಕಬಳಿಸುವ ಹುನ್ನಾರ ನಡೆದಿದೆ. ಈ ಸರಕಾರಿ ಆಸ್ತಿಗೆ 2008-09ರಲ್ಲೇ 5 ಸಾವಿರ ಕೋಟಿ ಅಂತ ಅಂದಾಜು ಕಟ್ಟಿದ್ದರು. ಆದರೆ, ಈ ಬಗ್ಗೆ ಸರಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ತೃತೀಯ ರಂಗವಲ್ಲ, ಪರ್ಯಾಯ ಶಕ್ತಿ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಜತೆಗಿನ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ತೃತೀಯ ರಂಗ ಅನ್ನೋದು ಪ್ರಶ್ನೆ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯ ಕನಸು ಅವರದ್ದು ಎಂದರು.
ಕೆಸಿಆರ್ ಅವರು ದೇಶದ ಸಮಸ್ಯೆ ಪರಿಹಾರಕ್ಕೆ ಅವರದ್ದೇ ಆದ ಒಂದು ಕಲ್ಪನೆ ಇಟ್ಟುಕೊಂಡಿದ್ದಾರೆ. ರೈತರ ವಿಚಾರದಲ್ಲಿ ಯಾವ ರೀತಿ ಸಹಾಯ ಆಗಬೇಕು, ರಾಷ್ಟ್ರ ಮಟ್ಟದಲ್ಲಿ ಯಾವ ರೀತಿ ಹೋಗಬೇಕು ಎಂಬ ವಿಚಾರ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ನಮ್ಮ ಬೆಂಬಲ ಕೋರಿದ್ದಾರೆ. ನಾವು ಅವರ ಜೊತೆ ಕೈ ಜೋಡಿಸುವ ನಿಟ್ಟಿನಲ್ಲಿ ಯೋಚಿಸಲಾಗಿದೆ ಅವರು ಹೇಳಿದರು.
ನಿಖಿಲ್ ಹೇಳಿಕೆಗೆ ಅಪಾರ್ಥ ಬೇಡ: ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು, ನಾನೇ ಅನೇಕ ಬಾರಿ ಹೇಳಿದ್ದೇನೆ. ಈ ಚುನಾವಣೆ ನಮಗೆ ನಿರ್ಣಾಯಕ. ಈ ಚುನಾವಣೆ ಮುಂದಿನ ದಿನಗಳಿಗೆ ಬುನಾದಿ ಇದ್ದಂಗೆ. ಮುಂದಿನ 25 ವರ್ಷಕ್ಕೆ ಏನು ಆಗಬೇಕು ಅನ್ನೋದು ಮುಖ್ಯ. ಅದಕ್ಕಾಗಿ ಈ ಚುನಾವಣೆ ತುಂಬಾ ಮುಖ್ಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.