Advertisement

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

03:11 PM Sep 16, 2024 | Team Udayavani |

ಮುಂಬೈ: ಇತ್ತೀಚೆಗೆ ಕಾಂಗ್ರೆಸ್‌ ಮುಖಂಡ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ( Rahul Gandhi) ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಬೇಕೆಂದು ನೀಡಿದ್ದ ಹೇಳಿಕೆಗೆ ಪ್ರತೀಕಾರವಾಗಿ ಯಾರಾದರೂ ಗಾಂಧಿಯ ನಾಲಿಗೆಯನ್ನು ಕತ್ತರಿಸಿದರೆ ಅವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್‌ ಗಾಯಕ್ವಾಡ್‌ ಹೇಳಿರುವುದು ವಿವಾದಕ್ಕೀಡಾಗಿದೆ ಎಂದು ವರದಿ ತಿಳಿಸಿದೆ.

Advertisement

ಶಾಸಕ ಗಾಯಕ್ವಾಡ್‌ ಸವಾಲಿನ ಹೇಳಿಕೆಯನ್ನು ನಾವು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್‌ ಬವಾನ್‌ ಕುಲೆ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನಾ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ.

ವಿದೇಶ ಪ್ರವಾಸದಲ್ಲಿದ್ದ ರಾಹುಲ್‌ ಗಾಂಧಿ, ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಕೊನೆಗಾಣಿಸುವುದು ನನ್ನ ಇಚ್ಛೆಯಾಗಿದೆ ಎಂದು ಹೇಳಿದ್ದರು. ಈ ಹೇಳಿಕೆ ಮೂಲಕ ಕಾಂಗ್ರೆಸ್‌ ನ ನಿಜವಾದ ಮುಖವಾಡ ಬಟಬಯಲಾಗಿದೆ ಎಂದು ಗಾಯಕ್ವಾಡ್‌ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಹುಮಾನ ಘೋಷಿಸಿದ್ದಾರೆ.

“ಯಾರೇ ಆಗಲಿ ರಾಹುಲ್‌ ಗಾಂಧಿಯ ನಾಲಿಗೆಯನ್ನು ಕತ್ತರಿಸಿದರೆ 11 ಲಕ್ಷ ರೂಪಾಯಿ ನೀಡುವುದಾಗಿ ಗಾಯಕ್ವಾಡ್‌ ತಿಳಿಸಿದ್ದಾರೆ. ಕಾಂಗ್ರೆಸ್‌ ಪಕ್ಷ ಅಂದು ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಅವರನ್ನೇ ಚುನಾವಣೆಯಲ್ಲಿ ಸೋಲಿಸಿತ್ತು ಎಂದು ಹೇಳಿದರು.

Advertisement

ನಾವು ಎಸ್‌ ಸಿ, ಎಸ್‌ ಟಿ ಮತ್ತು ಒಬಿಸಿ ವರ್ಗಗಳಿಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮನವರಿಕೆ ಮಾಡುತ್ತೇವೆ. ಅಲ್ಲದೇ ನೆಹರು, ರಾಜೀವ್‌ ಗಾಂಧಿ ಮತ್ತು ರಾಹುಲ್‌ ಗಾಂಧಿ ನೀಡಿರುವ ಹೇಳಿಕೆಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಅಲ್ಲದೇ ಮರಾಠ ಮೀಸಲಾತಿ ಬಗ್ಗೆ ಸಾಮಾಜಿಕ ಹೋರಾಟಗಾರ ಮನೋಜ್‌ ಜರಾಂಗೆ ಈ ಬಗ್ಗೆ ಆಲೋಚಿಸಬೇಕು ಎಂದು ಗಾಯಕ್ವಾಡ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next