Advertisement

Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ

04:38 PM May 13, 2024 | Team Udayavani |

ಉತ್ತರಪ್ರದೇಶ: ಸದ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣೆ ಪ್ರಚಾರದ ಬ್ಯುಸಿಯಲ್ಲಿದ್ದಾರೆ, ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ರ‍್ಯಾಲಿ ನಡೆಸುತ್ತಿದ್ದಾರೆ.

Advertisement

ರ‍್ಯಾಲಿಗೆ ಆಗಮಿಸಿದ ಜನರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ರಾಯ್ಬರೇಲಿಯೊಂದಿಗಿನ ತಮ್ಮ ಕುಟುಂಬದ ದೀರ್ಘಕಾಲದ ಸಂಬಂಧವನ್ನು ನೆನಪಿಸಿಕೊಂಡರು.

“ರಾಯಬರೇಲಿ ಮತ್ತು ನನ್ನ ಕುಟುಂಬವು ತುಂಬಾ ಹಳೆಯ ಸಂಬಂಧವನ್ನು ಹೊಂದಿದೆ ಎಂದು ಹಳೆಯ ನೆನಪುಗಳನ್ನು ಹಂಚಿಕೊಂಡರು ಅಲ್ಲದೆ ಕ್ಷೇತ್ರದ ಅಭಿವೃದ್ಧಿಯ ವಿಚಾರವಾಗಿ ಜನತೆಗೆ ಭರವಸೆಯನ್ನು ನೀಡಿದ ಅವರು ಅಂತಿಮವಾಗಿ ಕ್ಷೇತ್ರದ ಜನತೆಯಲ್ಲಿ ಆಶೀರ್ವಾದ ಪಡೆದು ಮುಂದುವರೆಯುವ ವೇಳೆ ಸಭೆಯ ಮಧ್ಯೆ ವ್ಯಕ್ತಿಯೊಬ್ಬರು ನಿಮ್ಮ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ್ದಾರೆ ಇದಕ್ಕೆ ಉತ್ತರಿಸಿದ ರಾಹುಲ್ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದೇನೆ ಎಂದು ಹೇಳಿ ಸಭೆಯಲ್ಲಿದ್ದ ಜನರಿಗೆ ಕೈ ಬೀಸುತ್ತಾ ಮುಂನ್ನಡೆದರು.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next