Advertisement

ಕರ್ನಾಟಕ ಆಕ್ರಮಿತ ಕೆಲಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲ್ಲಿದ್ದೇವೆ:ಉದ್ಧವ್ ಠಾಕ್ರೆ

06:29 PM Jan 17, 2021 | Team Udayavani |

ಮುಂಬೈ: ‘ಕರ್ನಾಟಕ ಆಕ್ರಮಿತ ಕೆಲಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲ್ಲಿದ್ದೇವೆ’ ಎಂಬ ಹೇಳಿಕೆ ನೀಡುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತೆ ಗಡಿ ವಿವಾದನ್ನು ಕೆದಕಿದ್ದಾರೆ.

Advertisement

ಈ ಕುರಿತಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ಟ್ಟೀಟ್ ಸಂದೇಶವನ್ನು ಪೋಸ್ಟ್ ಮಾಡಿದ್ದು, ಬಹುಸಂಖ್ಯೆಯಲ್ಲಿ ಮರಾಠಿ ಭಾಷೆಯನ್ನು ಮಾತನಾಡುವ ಹಾಗೂ ಮಾರಾಠಿ ಸಂಸ್ಕೃತಿಯನ್ನು ಒಳಗೊಂಡಿರುವ ಕೆಲವು ಪ್ರದೇಶವನ್ನು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸರ್ಕಾರ ಬದ್ಧವಾಗಿದೆ.  ಇದು ಗಡಿ ವಿವಾದಕ್ಕಾಗಿ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದವರಿಗೆ ನಾವು ನೀಡುವ ನಿಜವಾದ ಗೌರವವಾಗಿದೆ ಎಂದಿದೆ.

ನಾವು ಈ ಕುರಿತಾಗಿ ಸಂಪೂರ್ಣ ಬದ್ದರಾಗಿದ್ದೇವೆ.  ಆ ಮೂಲಕ ನಾವು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಎಂದು ಟ್ವೀಟ್ ಮಾಡಿದೆ.

ಕರ್ನಾಟಕದ ಬೆಳಗಾವಿಯ ಒಳಗೊಂಡಂತೆ ಕೆಲವು ಪ್ರದೇಶಗಳು ಹಿಂದೆ ಬಾಂಬೆ ಪ್ರೆಸಿಡೆನ್ಸಿಯ ಭಾಗವಾಗಿದ್ದು, ಇದೀಗ ಕರ್ನಾಟಕದ ಭೂಭಾಗದಲ್ಲಿದೆ ಎಂಬ ವಾದವಿದ್ದು, ಈ ಕುರಿತಾದ ಗಡಿ ವಿವಾದ ಹಲವು ವರ್ಷಗಳಿಂದ ಸುಪ್ರೀಂ ಕೋರ್ಟ್ ನ ವಿಚಾರಣೆಯಲ್ಲಿದೆ.

ಇದನ್ನೂ ಓದಿ:ಬೆಳಗಾವಿ : ಬಿಜೆಪಿ ಚಾಣಕ್ಯ ಅಮಿತ್ ಶಾಗೆ ಬೆಳ್ಳಿ ಗದೆ ನೀಡಿ, ರುದ್ರಾಕ್ಷಿ ಹಾರ ಹಾಕಿ ಸ್ವಾಗತ

Advertisement

ಕರ್ನಾಟಕದ ಬೆಳಗಾವಿ, ಕಾರವಾರ, ನಿಪ್ಪಾಣಿ ಪ್ರದೇಶದಲ್ಲಿ ವಾಸಿಸುತ್ತಿರುವ ಬಹುಸಂಖ್ಯಾತ ಜನರು ಮಾರಾಠಿ ಭಾಷೆಯನ್ನು ಮಾತನಾಡುತ್ತಾರೆ ಎಂದು ತಿಳಿಸುವ ಮೂಲಕ ಈ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ಅಲ್ಲಿನ ಸರ್ಕಾರ ಸಿದ್ಧತೆ ನಡೆಸಿದಂತಿದೆ.

ಬೆಳಗಾವಿ ಹಾಗೂ ಇತರ ಪ್ರದೇಶಗಳನ್ನು  ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಒತ್ತಾಯಿಸಿ 1956 ರಲ್ಲಿ ನಡೆದ ಹೋರಾಟದಲ್ಲಿ ಮಡಿದವರ ಗೌರವಾರ್ಥವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತೀ ವರ್ಷ ಜನವರಿ 17ನ್ನು ಹುತಾತ್ಮರ ದಿನವನ್ನಾಗಿ ಆಚರಿಸುತ್ತದೆ.

ಇದನ್ನೂ ಓದಿ:ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರೋ ಗೊತ್ತಿಲ್ಲ, ಭವಿಷ್ಯ ಮಾತ್ರ ಸುಳ್ಳಾಗುತ್ತಿದೆ;ಈಶ್ವರಪ್ಪ

Advertisement

Udayavani is now on Telegram. Click here to join our channel and stay updated with the latest news.

Next