Advertisement

ಮುಂದಿನ ಚುನಾವಣೆ ವೇಳೆಗೆ ಬಿಜೆಪಿಗೆ ಸೇರುತ್ತೇನೆ: ಬಸವರಾಜ ಹೊರಟ್ಟಿ

02:52 PM Apr 03, 2022 | Team Udayavani |

ಹುಬ್ಬಳ್ಳಿ: ಮುಂಬರುವ ವಿಧಾನಪರಿಷತ್ತು ಚುನಾವಣೆ ವೇಳೆಗೆ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ. ಬಹುತೇಕವಾಗಿ ಸೇರ್ಪಡೆ ಖಚಿತ. ಸಭಾಪತಿ ಸ್ಥಾನದಲ್ಲಿರುವುದರಿಂದ ಬಳಿಕ ಅಧಿಕೃತ ಘೋಷಣೆ ಮಾಡುವುದಾಗಿ ತಿಳಿಸಿದರು.

ಬಿಜೆಪಿ ನಾಯಕರೊಂದಿಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲು ಸಹಮತ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ, ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸಹಮತ ತೋರಿದ್ದಾರೆ ಎಂದರು.

ಇದನ್ನೂ ಓದಿ:ಗ್ರಾ.ಪಂ. ಗ್ರಂಥಾಲಯಕ್ಕೆ ಡಿಜಿಟಲ್‌ ಸ್ಪರ್ಶ: ವಿದ್ಯಾರ್ಥಿಗಳಿಗೆ ಅನುಕೂಲ

ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ಕೈಗೊಳ್ಳುವೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಈ ವಿಷಯವಾಗಿ ಚರ್ಚಿಸಿದ್ದೇನೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next