ನಾಸಿಕ್: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಜುಲೈ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದು, ಈ ವೇಳೆ ರಾಜ್ಯದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶನಿವಾರ ಹೇಳಿದ್ದಾರೆ.
ಶುಕ್ರವಾರದಂದು ಪ್ರಮುಖ ಹಣಕಾಸು ಮತ್ತು ಯೋಜನಾ ಖಾತೆಯನ್ನು ಪಡೆದುಕೊಂಡಿರುವ ಪವಾರ್, ಜುಲೈ 2 ರಂದು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾದ ನಾನು ಮತ್ತು ಇತರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಚಿವರು ಖಾತೆಗಳ ಹಂಚಿಕೆಯಿಂದ ಸಂತೋಷವಾಗಿದ್ದಾರೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , “ನಾನು ಜು. 18 ರಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುತ್ತೇನೆ. ರೈತರಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಅವರೊಂದಿಗೆ ಚರ್ಚಿಸುತ್ತೇನೆ. ಪ್ರಫುಲ್ ಪಟೇಲ್ ಮತ್ತು ನಾನು ಎನ್‌ಡಿಎ ಸಭೆಯಲ್ಲಿ ಭಾಗವಹಿಸುತ್ತೇವೆ” ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಸಿಎಂ ಶಿಂಧೆ ಬಣ ಹಣಕಾಸು ಖಾತೆಯನ್ನು ಬಿಟ್ಟುಕೊಡಲು ಸಿದ್ಧರಿಲ್ಲದ ಕಾರಣ, ಸಿಎಂ ಸ್ಥಾನವನ್ನು ಬಿಟ್ಟುಕೊಡಲು ಸೂಚಿಸಲಾಗಿದೆ ಎಂದು ಸಂಜಯ್ ರಾವುತ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಪವಾರ್, “ನನಗೆ ಗೊತ್ತಿಲ್ಲ ಅನವಶ್ಯಕವಾಗಿ ವಾತಾವರಣವನ್ನು ಕೆಡಿಸುವ ಪ್ರಯತ್ನ ಇದಾಗಿದೆ. ಖಾತೆ ಹಂಚಿಕೆಯಿಂದ ನಮಗೆ ಸಂತೋಷವಾಗಿದೆ” ಎಂದಿದ್ದಾರೆ.
ಸುಮಾರು 14 ಹುದ್ದೆಗಳು (ಸಚಿವ ಸಂಪುಟದಲ್ಲಿ) ಖಾಲಿಯಿದ್ದು, ಸಂಪುಟ ವಿಸ್ತರಣೆ ಮುಖ್ಯಮಂತ್ರಿಯ ಅವರ ಪರಮಾಧಿಕಾರ.ನಾನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.
ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ಸೇರಿದಂತೆ ಸುಮಾರು ಐದು ವಿಷಯಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ. ಮಹಾರಾಷ್ಟ್ರ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಆದೇಶ ನೀಡಿದೆ ಎಂದು ಹೇಳಿದರು.