Advertisement

CBI ಬಂಗಲೆ ನವೀಕರಣದ ವಿವಾದ; “ಮೋದಿ ರಾಜೀನಾಮೆ ನೀಡುವರೇ?’ಅರವಿಂದ್‌ ಕೇಜ್ರಿವಾಲ್‌

11:34 PM Sep 28, 2023 | Team Udayavani |

ಹೊಸದಿಲ್ಲಿ: “ನಿವಾಸ ನವೀಕರಣ ಪ್ರಕರಣದ ತನಿಖೆಯಲ್ಲಿ ಸಿಬಿಐ ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರವನ್ನು ಪತ್ತೆ ಹಚ್ಚದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವರೇ’ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ.

Advertisement

ಮುಖ್ಯಮಂತ್ರಿಗಳ ಸರಕಾರಿ ಬಂಗಲೆಯ ನವೀಕರಣಕ್ಕಾಗಿ ದಿಲ್ಲಿ ಸರಕಾರ 45 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ಸಂಬಂಧ ಬುಧವಾರ ಕೇಂದ್ರ ಗೃಹ ಸಚಿವಾಲಯವು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ. “ಇದರಲ್ಲಿ ಸಿಬಿಐ ಅಧಿಕಾರಿಗಳು ಏನನ್ನೂ ಪತ್ತೆಹಚ್ಚುವುದಿಲ್ಲ. ನಾನು ಅಧಿಕಾರಕ್ಕೆ ಬಂದ 8 ವರ್ಷಗಳಿಂದ ನನ್ನ ವಿರುದ್ಧ 33 ಪ್ರಕರಣಗಳನ್ನು ದಾಖಲಿಸಿದ್ದಾರೆ. ಯಾವ ಆರೋಪಗಳೂ ಸಾಬೀತಾಗಿಲ್ಲ. ಇದು ಹಾಗೇಯೇ ಆಗಲಿದೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next