ನವದೆಹಲಿ: ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ 4.5 ವರ್ಷಗಳ ಕಾಲ ಆಡಳಿತ ವಿರೋಧಿ ನೀತಿಯಿಂದಾಗಿ ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಸೋಲುವಂತಾಯ್ತು ಎಂಬ ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಕ್ಕೆ ಶುಕ್ರವಾರ(ಮಾರ್ಚ್ 11) ತಿರುಗೇಟು ನೀಡಿರುವ ಅಮರೀಂದರ್ ಸಿಂಗ್, ಕಾಂಗ್ರೆಸ್ ಹೈಕಮಾಂಡ್ (ಸೋನಿಯಾ ಗಾಂಧಿ, ರಾಹುಲ್ ಗಾಂಧಿ) ಯಾವತ್ತೂ ಪಾಠ ಕಲಿಯುವುದಿಲ್ಲ ಎಂದು ಟೀಕಿಸಿದ್ದಾರೆ.
ಇ
ದನ್ನೂ ಓದಿ:ಪಂಜಾಬ್ ಮತದಾರರು ಅತ್ಯುತ್ತಮ ನಿರ್ಧಾರ ಕೈಗೊಂಡಿದ್ದಾರೆ: ಆಪ್ ಜಯಭೇರಿಗೆ ಸಿಧು ಬಹುಪರಾಕ್
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಅಧಿಕಾರ ಕಿತ್ತುಕೊಂಡಿರುವ ಆಮ್ ಆದ್ಮಿ ಪಕ್ಷ ಸ್ಪಷ್ಟ ಜನಾದೇಶ ಪಡೆದುಕೊಂಡ ಬಳಿಕ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿಗೆ ಯಾರು ಹೊಣೆ? ಮಣಿಪುರ, ಗೋವಾ, ಉತ್ತರಾಖಂಡ್ ನ ಫಲಿತಾಂಶ ಏನಾಯ್ತು ಎಂದು ಅಮರೀಂದರ್ ಸಿಂಗ್ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಅಮರೀಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ನಂತರ ಬಂಡಾಯವೆದ್ದು, ತಮ್ಮದೇ ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ಸ್ವತಃ ಅಮರೀಂದರ್ ಸಿಂಗ್ ಪಟಿಯಾಲಾ ನಗರ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಜಿತ್ ಪಾಲ್ ಸಿಂಗ್ ಕೊಹ್ಲಿ ಎದುರು ಪರಾಯಗೊಂಡಿದ್ದರು.
ಪಂಜಾಬ್ ಚುನಾವಣೆಯಲ್ಲಿ ಸಿಂಗ್ ಅವರ ಪಂಜಾಬ್ ಲೋಕ್ ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಿಲ್ಲ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 92 ಸ್ಥಾನಗಳಲ್ಲಿ ಜಯಗಳಿಸಿದ್ದು, ಕಾಂಗ್ರೆಸ್ ಪಕ್ಷ ಕೇವಲ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.