Advertisement

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

12:39 AM May 06, 2024 | Shreeram Nayak |

ಶಿವಮೊಗ್ಗ: ಪ್ರಜ್ವಲ್‌ ಹಾಗೂ ರೇವಣ್ಣ ಪ್ರಕರಣ ಮುಂದಿಟ್ಟುಕೊಂಡು ಜೆಡಿಎಸ್‌ ಜತೆಗಿನ ಮೈತ್ರಿಯನ್ನು ಕಡಿದು ಕೊಳ್ಳುವುದಿಲ್ಲ. ಮೈತ್ರಿಯಲ್ಲಿ ಯಾವುದೇ ಬದಲಾವಣೆ ಕೂಡ ಮಾಡುವುದಿಲ್ಲ. ಪ್ರಜ್ವಲ್‌ ಪ್ರಕರಣದ ಕುರಿತು ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ದೇವೇಗೌಡರು ಇದರ ಬಗ್ಗೆ ತಲೆಕೆಡಿಸಿಕೊಳ್ಳದೆ ಆರೋಗ್ಯ ಸುಧಾರಿಸಿಕೊಳ್ಳಬೇಕು ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರ ಹತ್ತು ವರ್ಷಗಳ ಸಾಧನೆ ಮುಂದಿಟ್ಟು ನಾವು ಚುನಾವಣೆಯನ್ನು ಎದುರಿಸು ತ್ತಿದ್ದೇವೆ. ಆದರೆ ಕಾಂಗ್ರೆಸ್‌ ಸುಳ್ಳಿನ ಆಧಾರದಲ್ಲಿ ಚುನಾವಣೆ ಎದುರಿಸುತ್ತಿದೆ. ಸಿದ್ದರಾಮಯ್ಯ ವಿಧಾನಸಭಾ ಚುನಾವಣೆ ಗುಂಗಿನಿಂದ ಹೊರಬಂದಿಲ್ಲ. ಲೋಕಸಭಾ ಚುನಾವಣೆ ನಡೆಯುತ್ತಿದೆ ಎಂಬುದನ್ನು ಸಿದ್ದರಾಮಯ್ಯ ಮರೆತಿದ್ದಾರೆ. ಕಾಂಗ್ರೆಸ್‌ಗೆ ವಿಶ್ವಾಸಾರ್ಹ ನಾಯಕತ್ವ ಇಲ್ಲ. ಜನರನ್ನು ದಾರಿ ತಪ್ಪಿಸಿ ವಿವಾದ ಸೃಷ್ಟಿಸುವ ಕೆಲಸ ಕಾಂಗ್ರೆಸ್‌ ಮಾಡುತ್ತಿದೆ ಎಂದರು.

ಮೋದಿಯವರು ಎರಡು ಕೋಟಿ ಉದ್ಯೋಗ ಕೊಟ್ಟಿಲ್ಲ ಎಂದು ಕಾಂಗ್ರೆಸ್‌ನವರು ಆರೋಪಿಸುತ್ತಿದ್ದಾರೆ. ಆದರೆ 10 ವರ್ಷಗಳಲ್ಲಿ ಆಗಿರುವ ಉದ್ಯೋಗ ಸೃಷ್ಟಿಯ ಬಗ್ಗೆ ಕಾಂಗ್ರೆಸ್‌ ಮಾಹಿತಿ ಪಡೆದುಕೊಳ್ಳಬೇಕು. ಆರ್ಟಿಕಲ್‌ 370 ಅನ್ನು ರದ್ದುಪಡಿಸಿದ್ದನ್ನು ಪುನಃ ಜಾರಿಗೊಳಿಸುವುದಾಗಿ ಕಾಂಗ್ರೆಸ್‌ ಹೇಳಿದೆ.

ಕಾಂಗ್ರೆಸ್‌ ತುಷ್ಟೀಕರಣ ಮಾಡುತ್ತಿದೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಓಲೈಕೆ ಇದೆ. ಅದು ಸಂವಿಧಾನ, ಅಂಬೇಡ್ಕರ್‌ ವಿರೋಧಿ ಪ್ರಣಾಳಿಕೆ ಆಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಒಬಿಸಿಗೆ ಕಷ್ಟವಾಗಲಿದೆ. ಹಿಂದುಳಿದವರು ಮತ್ತು ದಲಿತರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ಕೊಡುತ್ತದೆ ಎಂದು ಹೇಳಿದರು.

ಕಾಂಗ್ರೆಸ್‌ ಆಡಳಿತದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಪಿಎಫ್‌ಐ ಜತೆ ಕಾಂಗ್ರೆಸ್‌ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ.

Advertisement

ಸಿದ್ದರಾಮಯ್ಯ ಸುಳ್ಳಿನ ಭಾಷಣ ಮಾಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಕೋವಿಡ್‌ ಲಸಿಕೆ ಬಗ್ಗೆ ಕಾಂಗ್ರೆಸ್‌ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಕಾಂಗ್ರೆಸ್‌ ತನ್ನ ಕಾಲಿನ ಮೇಲೆ ತಾನೇ ಕಲ್ಲು ಹಾಕಿಕೊಳ್ಳುತ್ತಿದೆ ಎಂದು ಹೇಳಿದರು.

ಮೂರು ಬಣಗಳಾಗಿ ಒಡೆದಿರುವ ಕಾಂಗ್ರೆಸ್‌
ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ.ಶಿವಕುಮಾರ್‌ ಬಣ ಹಾಗೂ ಮಲ್ಲಿಕಾರ್ಜುನ್‌ ಖರ್ಗೆ ಬಣಗಳಿವೆ. ರಾಹುಲ್‌ ಗಾಂ ಧಿಗೆ ಕೇರಳದಲ್ಲಿ ಗೆಲ್ಲುವ ವಿಶ್ವಾಸ ಇಲ್ಲ. ಅದಕ್ಕಾಗಿ ಅಮ್ಮನ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್‌ನ ಮಹಾರಾಣಿ ಸೋನಿಯಾ ಗಾಂ ಧಿ ಅವರ ಮಗನ ಗೆಲುವಿನ ಆಸೆ ನುಚ್ಚು ನೂರಾಗುತ್ತದೆ. ರಾಯ್‌ಬರೇಲಿಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next