Advertisement

ವಿಹೆಚ್ ಪಿ, ಬಜರಂಗದಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ: ಹೆಚ್ ಡಿಕೆ ಟ್ವೀಟ್

11:19 AM Apr 01, 2022 | Team Udayavani |

ಬೆಂಗಳೂರು: ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ವಿರುದ್ಧ ಆಕ್ರೋಶದಿಂದ ಕೂಡಿದ ಟ್ವೀಟ್ ಗಳನ್ನು ಮಾಡಿದ್ದಾರೆ.

Advertisement

‘ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ” ಎಂದು ಬರೆದಿದ್ದಾರೆ.

”ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ” ಎಂದು ಟ್ವೀಟ್ ನಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.

”ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ” ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next