Advertisement

ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ವಾಪಸ್‌ ಹೋಗಲ್ಲ: ಸಚಿವ ಶಿವರಾಮ ಹೆಬ್ಬಾರ್

08:24 PM Nov 07, 2022 | Team Udayavani |

ಶಿವಮೊಗ್ಗ: ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ವಾಪಸ್‌ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಬೇರೆ ಬೇರೆ ಪಕ್ಷಕ್ಕೆ ಹೋಗಿರುವವರು ವಾಪಸ್‌ ಪಕ್ಷಕ್ಕೆ ಬರಲು ಡಿಕೆಶಿ ಆಹ್ವಾನ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ವಾಪಸ್‌ ಬನ್ನಿ ಎಂದು ಹೇಳುವ ಹಕ್ಕು ಅವರಿಗಿದೆ. ಅವರ ಪಕ್ಷಕ್ಕೆ ಹೋಗುವುದು, ಬಿಡುವ ಅಧಿಕಾರ ನಮಗಿದೆ. ನಾವೆಲ್ಲಾ ಅಲ್ಲಿಂದ ಹೊರಗೆ ಬಂದಿದ್ದೇವೆ. ಮತ್ತೆ ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಸೂರ್ಯ-ಚಂದ್ರರು ಇರುವವರೆಗೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದಿದ್ದಾರೆ.

ನಾವೇನು ಅರ್ಜಿ ಹಾಕಿಲ್ಲ, ಅರ್ಜಿ ಹಾಕುವ ಅವಶ್ಯಕತೆಯೂ ನಮಗಿಲ್ಲ. ಈ ವಿಷಯದ ಬಗ್ಗೆ ಅವರು ಚರ್ಚೆ ಮಾಡಿಕೊಳ್ಳಲಿ. ನಾವು ಚರ್ಚೆ ಮಾಡಲ್ಲ. ನಾವು ಯಾರೂ ಮತ್ತೆ ಪಕ್ಷಕ್ಕೆ ಹೋಗುವ ವಿಚಾರವೇ ಇಲ್ಲ. ಇಡಬ್ಲ್ಯೂ ಎಸ್‌ ಮೀಸಲಾತಿ ಪರ ಸುಪ್ರೀಂ ತೀರ್ಪು ಸ್ವಾಗತಾರ್ಹ. ಶೇ.10ರಷ್ಟು ಮೇಲ್ವರ್ಗದಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಇದನ್ನು ಜಾರಿಗೊಳಿಸಲು ಮುಂದಾಗಿತ್ತು. ಆದರೆ ಕೆಲವರು ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು. ಯಾವುದೇ ವರ್ಗದಲ್ಲಿರುವ ಬಡವನಿಗೆ ಬದುಕುವ ಹಕ್ಕಿದೆ. ಸುಪ್ರೀಂ ಕೋರ್ಟ್‌ ಇದನ್ನು ಸಮರ್ಥಿಸಿದೆ.

ಕರ್ನಾಟಕದಲ್ಲಿ ಈ ಮೀಸಲಾತಿ ಇನ್ನೂ ಜಾರಿಯಾಗಿಲ್ಲ. ಸುಪ್ರೀಂ ಆದೇಶ ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಅದೇ ರೀತಿ ಕರ್ನಾಟಕದಲ್ಲೂ ಅನುಷ್ಠಾನವಾಗಲಿದೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next