Advertisement
ಇಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡರ ಮಾಜಿ ಪ್ರಧಾನಿ ಎಚ್ ಡಿಡಿ, ಜಿಟಿ ದೇವೇಗೌಡರು, ಮತ್ತವರ ಕುಟುಂಬ ಸದಸ್ಯರ ಜತೆ ಕುಶಲೋಪರಿ ನಡೆಸಿದರು.
Related Articles
Advertisement
ಬಳಿಕ ಮಾತನಾಡಿದ ಜಿಟಿ ದೇವೇಗೌಡ ಅವರು, ಎಚ್.ಡಿ.ದೇವೇಗೌಡರಿಗೆ ನನ್ನ ಬಗ್ಗೆ ಪ್ರೀತಿ ಇದೆ, ಮರಿ ದೇವೇಗೌಡ ಎಂದು ನನ್ನನ್ನು ಕರೆಯುತ್ತಿದ್ದರು. ಜಿಟಿಡಿ ಬಿಟ್ಟು ಹೋಗಲ್ಲ ಜೆಡಿಎಸ್ ಪಕ್ಷದಲ್ಲೆ ಇರುತ್ತಾನೆ ಎಂದು ಹೆಚ್.ಡಿ.ದೇವೇಗೌಡರು ಹೇಳಿದರು. ಅವರಿಗೆ ನನ್ನ ಮೇಲೆ ಇರುವ ವಿಶ್ವಾಸಕ್ಕೆ ಮನಸ್ಸು ತುಂಬಿ ಬಂದಿದೆ. ಹಿಂದೆ ಹಲವು ಸ್ಥಾನಮಾನವನ್ನು ಮಾಜಿ ಪ್ರಧಾನಿಗಳು ನನಗೆ ನೀಡಿದ್ದರು. ಮೂರು ವರ್ಷ ದೂರ ಇದ್ದರೂ ನನ್ನ ಬಗ್ಗೆ ಅವರಲ್ಲಿನ ಪ್ರೀತಿ ಕಡಿಮೆ ಆಗಿರಲಿಲ್ಲ. ಎಂದೂ ನನ್ನ ಬಗ್ಗೆ ಲಘುವಾಗಿ ಒಂದು ಮಾತನ್ನೂ ಆಡಲಿಲ್ಲ. ಅವರು, ಪ್ರಾದೇಶಿಕ ಪಕ್ಷ ಕಟ್ಟಿ ಉಳಿಸಿ ಬೆಳೆಸಿದರು. ಎಚ್.ಡಿ.ದೇವೇಗೌಡರು ಕಂಡ ಕನಸನ್ನು ನನಸು ಮಾಡುತ್ತೇನೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು ಮಾತನಾಡುತ್ತಲೇ ಭಾವುಕರಾದ ಜಿಟಿ ದೇವೇಗೌಡರು ಬಿಕ್ಕಿಬಿಕ್ಕಿ ಕಣ್ಣೀರಿಟ್ಟರು.
ಇದನ್ನೂ ಓದಿ:ದೆಹಲಿ ಪಟಾಕಿ ನಿಷೇಧ ಆದೇಶ ರದ್ದುಗೊಳಿಸಲು ಸುಪ್ರೀಂ ನಕಾರ; ಹಣ ಸಿಹಿ ತಿಂಡಿಗೆ ಉಪಯೋಗಿಸಿ…
ದೊಡ್ಡವರು ನನ್ನನ್ನು ಪ್ರೀತಿಯ ಹಗ್ಗದಿಂದ ಕಟ್ಟಿ ಹಾಕಿದ್ದಾರೆ. ನಾನು ಜೆಡಿಎಸ್ ನಲ್ಲಿ ಉಳಿಯುತ್ತೇನೆ. ಯಾವುದೇ ತ್ಯಾಗ ಮಾಡಲು ಸಿದ್ದ ಇದ್ದೇನೆ, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇನೆ. ಅದಕ್ಕಾಗಿ ದುಡಿಯುತ್ತೇನೆ. ಈಗ ನಮ್ಮಲ್ಲಿ ಯಾವುದೇ ಮುನಿಸು ಇಲ್ಲ, ಒಂದೇ ಒಂದು ದಿನ ಪಕ್ಷಕ್ಕೆ ಕಳಂಕ ಅಥವಾ ಧಕ್ಕೆ ತರುವ ಕೆಲಸ ಮಾಡಿಲ್ಲ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸೇರುವಂತೆ ಕರೆದಿದ್ದರು. ಬಿಜೆಪಿಯವರೂ ಕರೆದಿದ್ದಾರೆ. ಆದರೆ ನಾನು ಜೆಡಿಎಸ್ ಬಿಟ್ಟು ಹೋಗಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಸಾ.ರಾ.ಮಹೇಶ್, ಸಿ ಎಸ್ ಪುಟ್ಟರಾಜು ಸೇರಿದಂತೆ ಪಕ್ಷದ ಶಾಸಕರು, ಮುಖಂಡರು ಹಾಜರಿದ್ದರು.