Advertisement

ಫೆ.6ರ ರೈತ ಸಂಘಟನೆಯ ರಸ್ತೆ ಬಂದ್ ಪ್ರತಿಭಟನೆಗೆ ಬೆಂಬಲ ನೀಡಲ್ಲ: ಭಾರತೀಯ ಕಿಸಾನ್ ಸಂಘ

04:27 PM Feb 04, 2021 | Team Udayavani |

ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆ ವಿರುದ್ಧ ಫೆ.6ರಂದು ದೇಶವ್ಯಾಪಿ “ರಸ್ತೆ ತಡೆ” ನಡೆಸಲು ಕರೆಕೊಟ್ಟಿರುವ ಸಂಯುಕ್ತ್ ಕಿಸಾನ್ ಮೋರ್ಚಾದ ಪ್ರತಿಭಟನೆಗೆ ತಾವು ಬೆಂಬಲ ನೀಡುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ್ ಸಂಘದ ಅಂಗಸಂಸ್ಥೆಯಾದ ಭಾರತೀಯ ಕಿಸಾನ್ ಸಂಘ(ಬಿಕೆಎಸ್) ಗುರುವಾರ(ಫೆ.04) ತಿಳಿಸಿದೆ.

Advertisement

ಇದನ್ನೂ ಓದಿ:ನಶಿಸುತ್ತಿವೆ ಗರಡಿ ಮನೆಗಳು: ಪ್ರೋತ್ಸಾಹವಿಲ್ಲದೇ ಸೊರಗುತ್ತಿದ್ದಾರೆ ಜಗಜಟ್ಟಿ ಪೈಲ್ವಾನರು!

ಶನಿವಾರದಂದು ದೇಶಾದ್ಯಂತ ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ಬಂದ್ ಮಾಡಬೇಕೆಂಬ ಸಂಯುಕ್ತ್ ಕಿಸಾನ್ ಮೋರ್ಚಾ ಕರೆಗೆ ನಮ್ಮ ಬೆಂಬಲ ಇಲ್ಲ ಎಂದು ತಿಳಿಸಿದೆ.

ಮೂರು ಕಾಯ್ದೆ ವಿರೋಧಿಸಿ ಹಾಗೂ ದೆಹಲಿ ಗಡಿ ಪ್ರದೇಶದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ಫೆ.6ರಂದು ದೇಶಾದ್ಯಂತ ಹೆದ್ದಾರಿ ಬಂದ್ ನಡೆಸಿ ಪ್ರತಿಭಟನೆ ನಡೆಸುವುದಾಗಿ ರೈತ ಸಂಘಟನೆಗಳು ತಿಳಿಸಿದ್ದವು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ತಾವು ಬೆಂಬಲಿಸುವುದಾಗಿ ಹೇಳಿರುವ ಭಾರತೀಯ ಕಿಸಾನ್ ಸಂಘ, ಈ ಕಾನೂನು ರೈತರಿಗೆ ಅನುಕೂಲ ಕಲ್ಪಿಸಲಿದೆ ಎಂದು ತಿಳಿಸಿದೆ.

Advertisement

ಇದೀಗ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರೀತವಾಗಿದೆ. ಇದರಲ್ಲಿ ರಾಜಕೀಯ ಹಿತಾಸಕ್ತಿ ಇದ್ದಿರುವುದು ತುಂಬಾ ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಬಿಕೆಎಸ್ ಪ್ರಧಾನ ಕಾರ್ಯದರ್ಶಿ ಬದ್ರಿ ನಾರಾಯಣ್ ಚೌಧರಿ ಎಎನ್ ಐಗೆ ತಿಳಿಸಿದ್ದಾರೆ.

ಭಾರತದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಈ ಮೊದಲು ಕೆನಡಾ ರಾಜಕೀಯ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು, ನಂತರ ಬ್ರಿಟನ್ ಮುಖಂಡರು ಇದೀಗ ಬೇರೆ, ಬೇರೆ ದೇಶಗಳ ಸೆಲೆಬ್ರಿಟಿಗಳು ಬೆಂಬಲಿಸುತ್ತಿದ್ದು, ಇದು ಭಾರತದ ವಿರುದ್ಧದ ಸಂಚು ಎಂಬುದು ಸಾಬೀತಾಗಿದೆ. ಇದರಿಂದ ದೇಶದ ಶಾಂತಿ ಮತ್ತು ಏಕತೆಗೆ ಧಕ್ಕೆಯಾಗಲಿದೆ ಎಂದು ಹೇಳಿದರು.

ಅಷ್ಟೇ ಅಲ್ಲ ಫೆಬ್ರುವರಿ 6ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಕೆಲವು ಸಮಾಜ ವಿರೋಧಿ ಶಕ್ತಿಗಳು ಭಾಗವಹಿಸುವ ಸಾಧ್ಯತೆ ಇದ್ದಿರುವುದಾಗಿ ಚೌಧರಿ ಕಳವಳ ವ್ಯಕ್ತಪಡಿಸಿದ್ದು, ಇದರಿಂದ ನಮ್ಮ ದೇಶದ ಸೌಹಾರ್ದತೆ ಮತ್ತು ಶಾಂತಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಾದ ಎಚ್ಚರಿಕೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next